ಬೆಂಗಳೂರು : ಬೆಂಗಳೂರಿನಲ್ಲಿ ಇದೀಗ ಮತ್ತೊಂದು ಸೂಸೈಡ್ ಪ್ರಕರಣ ವರದಿಯಾಗಿದ್ದು, ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು, ಸಾಲದಿಂದ ಬೇಸತ್ತು ಬೆಂಗಳೂರಿನ ಮಲ್ಲೇಶ್ವರ ಬಳಿ ಇರುವ ಮಂತ್ರಿ ಮಾಲ್‌ನ 2ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ತುಮಕೂರು ಜಿಲ್ಲೆಯ ತಿಪಟೂರಿನ ನಿವಾಸಿ ಟಿ.ಸಿ. ಮಂಜುನಾಥ್ (55) ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ 9ರ ಸುಮಾರಿಗೆ ಮಾಲ್‌ನಲ್ಲಿ ಹೆಚ್ಚಿನ ಗ್ರಾಹಕರು ಇದ್ದರು. ಅದೇ ವೇಳೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಂಜುನಾಥ್ ಅವರು ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆಕೊಂಡಿರುವ ಸಾಧ್ಯತೆಯಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.