ಬೆಂಗಳೂರು : ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯದ ನಿವೃತ್ತ ರಿಜಿಸ್ಟರ್ ಒಬ್ಬರ ಜೊತೆಗೆ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಮನನೊಂದು, ಲಾರಿ ಮಾಲೀಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ.
ಹೌದು ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ತಡರಾತ್ರಿ 11 ಗಂಟೆಯ ಸುಮಾರಿಗೆ ಲಾರಿ ಮಾಲಿಕ ಸ್ವಾಮಿ (45) ಎನ್ನುವರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಠಾಣೆ ಪೋಲಿಸರು ಭೇಟಿ ನೀಡಿ ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಸ್ವಾಮಿ ಪತ್ನಿಯು ಬೆಂಗಳೂರಿನ ವಿವಿಯ ನಿವೃತ್ತ ರಿಜಿಸ್ಟರ್ ಜೊತೆಗೆ ಅಕ್ರಮ ಸಂಬಂಧ ಆರೋಪ ಕೇಳಿಬರುತ್ತಿದೆ. ಬೆಂಗಳೂರಿನ ವಿಶ್ವವಿದ್ಯಾಲಯ ನಿವೃತ್ತ ರೆಜಿಸ್ಟರ್ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಅಕ್ರಮ ಸಂಪರ್ಕದ ಬಳಿಕ ಸಂಸಾರ ಹಾಳಾಗಿದೆ. ನಿವೃತ್ತ ರಿಜಿಸ್ಟರ್ ಪತ್ನಿಗೂ ಕೂಡ ಈ ವಿಷಯ ಗೊತ್ತಾಗಿ ಬುದ್ಧಿ ಹೇಳಿದರು. ಆದರೂ ಕೂಡ ಸ್ವಾಮಿ ಪತ್ನಿ ತನ್ನ ಕೆಲಸ ಬಿಟ್ಟಿರಲಿಲ್ಲ ಎಂದು ಗಂಭೀರವಾದ ಆರೋಪ ಕೇಳಿ ಬಂದಿದೆ. ಮೃತ ಸ್ವಾಮಿಯ ಸಂಬಂಧಿ ನಾಗರಾಜ್ ಸ್ವಾಮಿ ಪತ್ನಿಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದಾರೆ.