ಬೆಂಗಳೂರು: ನಗರದಲ್ಲಿ ಇಂದು ಘೋರ ಘಟನೆಯೊಂದು ನಡೆದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ಮೇಲ್ಸೇತುವೆಯ ಮೇಲಿನಿಂದ ವ್ಯಕ್ತಿಯೊಬ್ಬ ಕಾರಿನ ಮೇಲೆ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ.
ಬೆಂಗಳೂರಿನ ಸಿಎಂ ಸಿದ್ಧರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದ ಕೂಗಳತೆಯ ದೂರದಲ್ಲಿರುವಂತ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬ ಕೆಳಗೆ ಸಂಚರಿಸುತ್ತಿದ್ದಂತ ಕಾರಿನ ಮೇಲೆ ಬಿದ್ದಿದ್ದಾನೆ.
ಸೇತುವೆಯ ಮೇಲಿನಿಂದ ಕಾರಿನ ಮೇಲೆ ಬಿದ್ದಂತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಮೇಲಿನಿಂದ ಕಾರಿನ ಮೇಲೆ ವ್ಯಕ್ತಿ ಬೀಳುತ್ತಿದ್ದಂತೇ ಕಾರಿನ ಗಾಜು ಪುಡಿಪುಡಿಯಾಗಿದೆ.
ಸಂಚರಿಸುತ್ತಿದ್ದಂತ ರೈಲಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೇ ಅಥವಾ ಮೇಲ್ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಹೈಗ್ರೌಂಡ್ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಾರ್ಚ್14 ಅಥವಾ 15 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ: ವರದಿ
Watch Video: ‘ಬರಗಾಲ’ದಲ್ಲೂ ಖುಲಾಯಿಸಿದ ‘ರೈತ’ನ ಅದೃಷ್ಠ: ‘ಬೇಸಿಗೆ’ಯಲ್ಲೂ ಬೋರಲ್ಲಿ 45 ಅಡಿಗೆ ‘2.5 ಇಂಚು’ ನೀರು