ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬಿದ್ದು 22 ವರ್ಷದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬಳಿಯ ರೈಲ್ವೆ ಸೇತುವೆ ಬಳಿ ಮಂಗಳವಾರ ನಡೆದಿದೆ.
ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗುತ್ತೆ: ಸುಮಲತಾ ಅಂಬರೀಶ್ ವಿಶ್ವಾಸ!
ಮೂಲತಃ ತಮಿಳುನಾಡಿನವರಾದ ಗೌರಿಶಂಕರ್ ಬಳ್ಳಾರಿ ರಸ್ತೆಯಲ್ಲಿ ಸೇತುವೆಯ ಕೆಳಗೆ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದರು. ಮಧ್ಯಾಹ್ನ 3.15 ರಿಂದ 3.20 ರ ನಡುವೆ ಅಪಘಾತ ಸಂಭವಿಸಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ರೈಲ್ವೆ ಪೊಲೀಸ್ ಅಧಿಕಾರಿ ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ತಿಳಿಸಿದ್ದಾರೆ.
ಪರಿಣಾಮವಾಗಿ ಕಾರಿನ ಎಡ ಹಿಂಭಾಗದ ಕಿಟಕಿ ಪುಡಿಪುಡಿಯಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಹಿಂದಿನ ವಾಹನಗಳಿಗೆ ಯಾವುದೇ ಹಾನಿಯಾಗಿಲ್ಲ.
‘ಗೌರಿಶಂಕರ್ ಅವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ’ ಎಂದು ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದರು.
“ಸೇತುವೆಯ ಮೇಲೆ ರೈಲ್ವೆ ಹಳಿಗೆ ಪ್ರವೇಶಿಸಲು ಸ್ಥಳವಿಲ್ಲ. ಆತನ ಬಳಿ ಬೆಂಗಳೂರು-ಅಂಬೂರು ಟಿಕೆಟ್ ಇದ್ದುದರಿಂದ ಆತ ಚಲಿಸುತ್ತಿದ್ದ ರೈಲಿನಿಂದ ಬಿದ್ದಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಅವರ ಬಳಿ ಕೆಲವು ದಾಖಲೆಗಳನ್ನು ಹೊಂದಿರುವ ಬ್ಯಾಕ್ಪ್ಯಾಕ್ ಇತ್ತು. ಫುಟ್ ಬೋರ್ಡ್ ಮೇಲೆ ನಿಂತಿರುವಾಗ ಅವನು ಆಕಸ್ಮಿಕವಾಗಿ ಬಿದ್ದಿರಬಹುದು.”ಎಂದಿದ್ದಾರೆ.
ಪೊಲೀಸರು ಎಲ್ಲಾ ಕೋನಗಳಲ್ಲಿ ಪರಿಶೀಲಿಸುತ್ತಾರೆ. ಅವರು ಗೌರಿಶಂಕರ್ ಅವರ ಪೋಷಕರನ್ನು ಸಂಪರ್ಕಿಸಿದ್ದಾರೆ.
ಕೂಡಲೇ ಹೈಗ್ರೌಂಡ್ಸ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.