ಬೆಂಗಳೂರು : ಮಗು ಮಾಡಿಕೊಳ್ಳುವ ವಿಚಾರಕ್ಕೆ ಪತಿ ಪತ್ನಿಯ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದಾಗ ಪತಿ ಪತ್ನಿಯನ್ನು ಉಸಿರಿಗಟ್ಟಿಸಿ ಕೊಂದಿರುವ ಘಟನೆ ಬೆಂಗಳೂರಿನ ಎಚ್.ಎ.ಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಪತ್ನಿಯನ್ನು ಗಿರಿಜಾ ಎಂದು ಹೇಳಲಾಗುತ್ತಿದ್ದು, ಹತ್ಯೆಗೈದ ಪತಿಯನ್ನ ನವೀನ್ ಎಂದು ತಿಳಿದುಬಂದಿದೆ. ಮಗು ಮಾಡಿಕೊಳ್ಳುವ ವಿಚಾರವಾಗಿ ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು, ನಿನ್ನೆ ಮತ್ತೆ ಇದೆ ವಿಚಾರವಾಗಿ ಗಲಾಟೆ ನಡೆದಾಗ ಮಹಿಳೆ ಮಲಗಿದ್ದ ವೇಳೆ ಆರೋಪಿ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.
ಗಿರಿಜಾ ಮತ್ತು ನವೀನ್, ಕಳೆದ 8 ತಿಂಗಳ ಹಿಂದಷ್ಟೇ ಮದುವೆ ಆಗಿದ್ದರು. ಆರೋಪಿ ನವೀನ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಈ ಸಂಬಂಧ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.