ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರ-ಬಾಳುಪೇಟೆ ಮಾರ್ಗದ ಅಚ್ಚಂಗಿಯಲ್ಲಿ ಭೂಕುಸಿತ ಸಂಭವಿಸಿದ್ದು, ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರವನ್ನು ಮುಂದಿನ ಸೂಚನೆ ಬರುವವರೆಗೆ ರದ್ದುಪಡಿಸಲಾಗಿದೆ.
ಆಗಸ್ಟ್ 18 ಮತ್ತು 19 ರಂದು ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು, ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ರೈಲುಗಳನ್ನು ರದ್ದುಪಡಿಸಲಾಗಿದೆ. ಕೆಎಸ್ಆರ್ ಬೆಂಗಳೂರು-ಕಾರವಾರ, ಕಾರವಾರ-ಕೆಎಸ್ಆರ್ ಬೆಂಗಳೂರು, ಕೆಎಸ್ಆರ್ ಬೆಂಗಳೂರು-ಕಣ್ಣೂರು, ಕಣ್ಣೂರು-ಕೆಎಸ್ಆರ್ ಬೆಂಗಳೂರು, ವಿಜಯಪುರ-ಮಂಗಳೂರು ಸೆಂಟ್ರಲ್ ರೈಲುಗಳನ್ನು ರದ್ದುಪಡಿಸಲಾಗಿದೆ.
ಆಗಸ್ಟ್ 19 ರಂದು ಯಶವಂತಪುರ-ಕಾರವಾರ, ಆಗಸ್ಟ್ 20 ರಂದು ಕಾರವಾರ-ಯಶವಂತಪುರ, ಆಗಸ್ಟ್ 19 ಮತ್ತು 20 ರಂದು ಮಂಗಳೂರು ಸೆಂಟ್ರಲ್-ವಿಜಯಪುರ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ರೈಲ್ವೆ ಹಳಿಯಿಂದ ಅವಶೇಷಗಳನ್ನು ತೆಗೆದುಹಾಕುವ ಕೆಲಸವು ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಪ್ರಗತಿಯಲ್ಲಿದೆ. ಅವಶೇಷಗಳನ್ನು ತೆಗೆದುಹಾಕಿದ ನಂತರ ರೈಲು ಸೇವೆಗಳು ಪುನರಾರಂಭಗೊಳ್ಳಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ