ಬೆಂಗಳೂರು: ರಾಜ್ಯ ಸರ್ಕಾರದಿಂದಲೇ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಬೆಂಗಳೂರಲ್ಲಿ ಫೆಬ್ರವರಿ 26, 27ರಂದು ಉದ್ಯೋಗ ಮೇಳವನ್ನು ಆಯೋಗಿಸಲಾಗುತ್ತಿದೆ. ಈ ಉದ್ಯೋಗ ಮೇಳದಲ್ಲಿ ನೀವು ಭಾಗವಹಿಸೋದಕ್ಕೆ ಮೊದಲು ನೋಂದಣಿ ಮಾಡಿಕೊಳ್ಳುವುದು ಮುಖ್ಯವಾಗಿದೆ. ಹಾಗಾದ್ರೇ ಹೇಗೆ ನೋಂದಣಿ ಮಾಡಿಕೊಳ್ಳಬೇಕು ಎನ್ನುಬ ಬಗ್ಗೆ ಮುಂದೆ ಓದಿ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಯುವ ಸಮೃದ್ಧಿ ಸಮ್ಮೇಳನದ ಭಾಗವಾಗಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರಪರಿ.26, 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
ಹೀಗೆ ಮಾಡುವುದು ಕಡ್ಡಾಯ
ಫೆಬ್ರವರಿ.26, 27ರಂದು ನೀವು ಉದ್ಯೋಗ ಮೇಳದಲ್ಲಿ ಭಾಗವಹಿಸೋದಾದರೇ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಮಾಡಿಕೊಂಡವರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸೋದಕ್ಕೆ ಅವಕಾಶ ನೀಡಲಾಗುತ್ತಿದೆ.
ಹೀಗೆ ನೋಂದಣಿ ಮಾಡಿ
ಉದ್ಯೋಗಾಕಾಂಕ್ಷಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ, ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದಾಗಿದೆ.
- https://skillconnect.kaushalkar.com/ ಗೆ ಭೇಟಿ ನೀಡಿ
- ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
- ಉದ್ಯೋಗ ಮೇಳ ಮೇಲೆ ಕ್ಲಿಕ್ ಮಾಡಿ
- ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ
- ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ
ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ: ಅರ್ಚಕರು, ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 50 ಸಾವಿರ ರೂ