ಬೆಂಗಳೂರು: ನಗರದಲ್ಲಿ ಬಿಡದಿ ಹಾಫ್ ಮ್ಯಾರಥಾನ್, ಐಪಿಎಲ್ ಪಂದ್ಯಾವಳಿಯ ಕಾರಣದಿಂದಾಗಿ ಮೆಟ್ರೋ ಸಂಚಾರದ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಬಿಡದಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ದಿನಾಂಕ 24ನೇ ಮಾರ್ಚ್ 2024 (ಭಾನುವಾರ) ದಂದು ನಿಗದಿಯಾಗಿರುವ ಬಿಡದಿ ಹಾಫ್ ಮ್ಯಾರಥಾನ್ನಲ್ಲಿ ಸಾರ್ವಜನಿಕರು ಭಾಗವಹಿಸಲು ಅನುಕೂಲಕ್ಕಾಗಿ, BMRCL ತನ್ನ ಎಲ್ಲಾ ನಾಲ್ಕು ಟರ್ಮಿನಲ್ಗಳಿಂದ ಮತ್ತು ಇಂಟರ್ಚಿಂಜ್ ಸ್ಟೇಷನ್ ನಾಡಪ್ರಭು ಕೆಂಪೇಗೌಡ ಮೆಟ್ರೋ ಸ್ಟೇಷನ್-ಮೆಜೆಸ್ಟಿಕ್ನಿಂದ ಬೆಳಿಗ್ಗೆ 07:00 ಗಂಟೆ ಬದಲಾಗಿ 04:30 ಗಂಟೆಯಿಂದ ಮೆಟ್ರೋ ರೈಲು ಸೇವೆಗಳನ್ನು ಪ್ರಾರಂಭಿಸುತ್ತದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, BMRCL ದಿನಾಂಕ 25,29 ಮಾರ್ಚ್ ಮತ್ತು 02 ಏಪ್ರಿಲ್ 2024 ರಂದು ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ತನ್ನ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30 ಕ್ಕೆ ವಿಸ್ತರಿಸಲಾಗಿದೆ ಎಂದು ಹೇಳಿದೆ.
ಈ ಪಂದ್ಯದ ದಿನಗಳಲ್ಲಿ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2.00 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್ಗಳು: ರೂ. 50/- ಮಾರಾಟಕ್ಕೆ ಲಭ್ಯವಿರುತ್ತದೆ, ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರಿಗೆ ಮಾನ್ಯವಾಗಿರುತ್ತದೆ ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ.
ಎಂದಿನಂತೆ, QR ಕೋಡ್ ಟಿಕೆಟ್ಗಳು, ಸ್ಮಾರ್ಟ್ ಕಾರ್ಡ್ಗಳು ಮತ್ತು NCMC ಕಾರ್ಡ್ಗಳನ್ನು ಸಹ ಬಳಸಬಹುದು, ವಾಟ್ಸ್ ಆಪ್/ನಮ್ಮ ಮೆಟ್ರೋ ಅವ್ವೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ OR ಟಿಕೆಟ್ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.
ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಲಾಗಿದೆ.
ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟದ ಆರೋಪಿಯ ಬಗ್ಗೆ ‘NIA’ಗೆ ಮಹತ್ವದ ಸುಳಿವು ಪತ್ತೆ
BREAKING : ದೆಹಲಿ ಸಿಎಂ ‘ಕೇಜ್ರಿವಾಲ್’ ಅಸ್ವಸ್ಥ : ‘Bp’ ಲೋ, ಕೋರ್ಟ್’ನಿಂದ ಹೊರ ಕರೆತಂದ ಅಧಿಕಾರಿಗಳು