ಬೆಂಗಳೂರು : ಮಿನಿ ಬಸ್ ಡಿಕ್ಕಿಯಾಗಿ ಕಾರಿನ ಚಾಲಕ ಸ್ಥಳದಲ್ಲಿ ಸಾವನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗೆಜ್ಜೆಗದಹಳ್ಳಿ ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಗಾಯಾಳುಗಳಿಗೆ ನೆಲಮಂಗಲದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾರ್ಮೆಂಟ್ಸ್ ಫ್ಯಾಕ್ಟರಿಯ ಮಹಿಳೆಯರನ್ನು ಮಿನಿ ಬಸ್ ಕರೆದುಕೊಂಡು ಹೋಗುತ್ತಿತ್ತು.

ಈ ವೇಳೆ ವೇಗವಾಗಿ ಬಂದಂತಹ ಮಿನಿ ಬಸ್ ಕಾರ್ಯಾಡಿಕೆ ಹೊಡೆದಿದೆ ಪರಿಣಾಮ ಚಾಲಕ ನವೀನ್ ಎನ್ನುವ ವ್ಯಕ್ತಿ ಸ್ಥಳದಲ್ಲಿ ಸಾವನಪ್ಪಿದ್ದು ಬಸ್ ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ ತಕ್ಷಣ ಅವರನ್ನು ನೆಲಮಂಗಲದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share.
Exit mobile version