ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಗಳ ಸಂಖ್ಯೆ ನಿಯಂತ್ರಣ ಮಾಡುವುದಕ್ಕೆ ಮಹತ್ವದ ಕ್ರಮ ವಹಿಸಲಾಗಿದೆ. ಈ ಹೆದ್ದಾರಿಯಲ್ಲಿ ತೆರಳುವಂತ ವಾಹನಗಳ ಸವಾರರಿಗೆ ವೇಗದ ಮಿತಿಯನ್ನು ನಿಗದಿ ಪಡಿಸಲಾಗಿದೆ. ಆ ವೇಗವನ್ನು ಮೀರಿದ್ದೇ ಆದರೇ ಎಫ್ಐಆರ್ ಜೊತೆಗೆ, ದಂಡ ಫಿಕ್ಸ್ ಆಗಿದೆ.
ಈ ಕುರಿತಂತೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅತ್ಯಾಧುನಿಕ ಸಿಸಿಟಿವಿ ಅಳವಡಿಸಲಾಗಿದೆ. ಹೆದ್ದಾರಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ 100 ಕಿಲೋಮೀಟರ್ ಮಿತಿ ನಿಗದಿ ಪಡಿಸಲಾಗಿದೆ. 130 ಕಿಲೋಮೀಟರ್ ವೇಗದಲ್ಲಿ ಚಲಿಸುವಂತ ವಾಹನಗಳ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ದಂಡವನ್ನು ಹಾಕಲಾಗುತ್ತದೆ ಎಂದಿದ್ದಾರೆ.
ಐಟಿಎಂಎಸ್ ಕ್ಯಾಮರಾಗಳ ಮೂಲಕ ವಾಹನಗಳ ಮೇಲೆ, ವೇಗ ಮಿತಿ ಮೀರುವವರ ಮೇಲೆ ನಿಗಾ ವಹಿಸಲಾಗಿದೆ. ಈವರೆಗೆ 193 ವಾಹನಗಳ ಮಾಲೀಕರ ವಿರುದ್ಧ ಕೇಸ್ ದಾಖಲಿಸಲಾಗಿದೆ. 2 ಲಕ್ಷಕ್ಕೂ ಅಧಿಕ ವಾಹನ ಸವಾರರು ನಿಯಮ ಮೀರಿದ್ದರ ವಿರುದ್ಧ ಕ್ರಮ ವಹಿಸಲಾಗಿದೆ. ಹೀಗಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವೇಗವಾಗಿ ಹೋಗುವವರು ಎಚ್ಚರಿಕೆ ವಹಿಸಿ. ವೇಗದ ಮಿತಿಯನ್ನು ಮೀರಿ ವಾಹನಗಳನ್ನು ಚಲಾಯಿಸದಂತೆ ಮನವಿ ಮಾಡಿದರು.
ಮುಡಾ ಸಂಕಷ್ಟದ ಹೊತ್ತಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ
BREAKING: ‘ಶಿವಮೊಗ್ಗ ಜಿಲ್ಲೆ’ಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ‘DJ ಬಳಕೆ’ಗೆ ನಿಷೇಧ ಹೇರಿ ‘DC ಆದೇಶ’
BIG NEWS : ಏನ್ರಿ ಮೀಡಿಯಾ?…ಎಂದಿದ್ದ ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ಟಿವಿ ಬೇಕೆ ಬೇಕಂತೆ!