ಮಂಡ್ಯ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳು ಸಂಭವಿಸದೆ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.ಬೆಂಗಳೂರಿನ ಆರ್.ಟಿ.ನಗರ ನಿವಾಸಿ ವಿನೋದ್ (46) ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾದವರು ಎನ್ನಲಾಗಿದೆ.
ಅಬುಧಾಬಿ ಹಿಂದೂ ದೇವಾಲಯ:’ಸಾಕುಪ್ರಾಣಿಗಳು’,ಡ್ರೋನ್‌ಗಳಿಗೆ ಅನುಮತಿ ಇಲ್ಲ: ಡ್ರೆಸ್ ಕೋಡ್ ಕಡ್ಡಾಯ
ಆರ್.ಟಿ.ನಗರ ನಿವಾಸಿ ವಿನೋದ್ ಜ್ಯುವೆಲ್ಲರಿ ಶಾಪ್ ಮಾಲೀಕರಾಗಿದ್ದು, ಚಾಮರಾಜನಗರದ ಕನಕಗಿರಿ ಮಠಕ್ಕೆ ತೆರಳಿ ಪೀಠಾಧಿಪತಿಗಳ ಆಶೀರ್ವಾದ ಪಡೆದು ನಂತರ ಬೆಂಗಳೂರಿನ ಕಡೆಗೆ ಮಹೇಂದ್ರ ಎಕ್ಸ್.ಯು.ವಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಕಾರು ಮದ್ದೂರಿನ ಫ್ಲೈ ಓವರ್ ಇಳಿಯುತ್ತಿದ್ದಂತೆ ಕಾರಿನ ಮುಂಭಾಗದ ಎಡ ಭಾಗದ ಟೈರ್ ಸ್ಪೋಟಗೊಂಡು ಅಂದಾಜು 8 ರಿಂದ 9 ಭಾರಿ ಪಲ್ಟಿ ಹೊಡೆದು ಡಿವೈಡರ್ ಗೆ ಗುದ್ದಿ ಸಂಪೂರ್ಣವಾಗಿ ಜಖಂ ಗೊಂಡಿದೆ. ಅಪಘಾತದ ತೀವ್ರತೆಗೆ ಕಾರಿನ ವಿವಿಧ ಭಾಗಗಳ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ತಕ್ಷಣವೇ ಹೆದ್ದಾರಿಯ ವಾಹನ ಸವಾರರು ಹಾಗೂ ಸ್ಥಳೀಯರು ಧಾವಿಸಿ ಕಾರಿನಲ್ಲಿದ್ದವರನ್ನು ಹೊರ ತೆಗೆದು ರಕ್ಷಿಸಿದ್ದು, ಯಾವುದೇ ಸಣ್ಣ ಪುಟ್ಟ ಗಾಯಗಳಾಗದೆ, ಬದುಕುಳಿದಿದ್ದಾರೆ.ಸ್ಥಳಕ್ಕೆ ಮದ್ದೂರು ಸಂಚಾರ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಜೆ.ಇ.ಮಹೇಶ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
1.25 ಕೋಟಿ ಭಾರತೀಯ ಮಕ್ಕಳಿಗೆ ಬೊಜ್ಜಿನ ಸಮಸ್ಯೆ: ಆತಂಕ ಮೂಡಿಸಿದ ಲ್ಯಾನ್ಸೆಟ್ ವರದಿ!
ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ತಪ್ಪದೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಂದು ನಡೆದಿರುವ ಭೀಕರ ಅಪಘಾತದಲ್ಲಿ ಸೀಟ್ ಬೆಲ್ಟ್ ಹಾಕಿರುವ ಪರಿಣಾಮ ಪ್ರಯಾಣಿಕರಿಗೆ ಯಾವುದೇ ರೀತಿಯ ಸಣ್ಣ ಪುಟ್ಟ ಗಾಯಗಳಾಗಿಲ್ಲ ಹಾಗಾಗಿ ಪ್ರಯಾಣಿಕರು ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷಿತವಾಗಿ ಪ್ರಯಾಣಿಸಿ ಎಂದು ಸಂಚಾರ ಪೋಲೀಸ್ ಠಾಣೆಯ ಸಬ್ ಸಬ್ ಇನ್ಸ್ಪೆಕ್ಟರ್ ಜೆ.ಇ.ಮಹೇಶ್ ಮನವಿ ಮಾಡಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ