BREAKING: ಬೆಂಗಳೂರಲ್ಲಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಕೇಸ್: ಓರ್ವ ಯುವಕನನ್ನು ಪೊಲೀಸರು ವಶಕ್ಕೆ

ಬೆಂಗಳೂರು: ನಗರದ ರಾಜರಾಜೇಶ್ವರಿ ಕಾಲೇಜಿನಲ್ಲಿನ ಶೌಚಾಲಯದಲ್ಲಿ ಯುವತಿಯರ ವೀಡೀಯೋವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದಂತ ಶಾಕಿಂಗ್ ವಿಷಯ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ಪೊಲೀಸರಿಂದ ಓರ್ವ ಅನುಮಾನಾಸ್ಪದ ಯುವಕನನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ರಾಜರಾಜೇಶ್ವರಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ನಿಂದ ಯುವತಿಯ ವೀಡಿಯೋವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದಂತ ಘಟನೆ ಬೆಳಕಿಗೆ ಬಂದಿತ್ತು. ಈ ಬೆನ್ನಲ್ಲೇ ರಾಜರಾಜೇಶ್ವರಿ ಕಾಲೇಜಿನ ವಿದ್ಯಾರ್ಥಿನಿಯರು ಯುವಕನನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಲೇಜಿನಲ್ಲಿ ಪ್ರತಿಭಟನೆ ನಡೆಸುತ್ತಿರುವಂತ ವಿಷಯ ತಿಳಿದಂತ … Continue reading BREAKING: ಬೆಂಗಳೂರಲ್ಲಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಕೇಸ್: ಓರ್ವ ಯುವಕನನ್ನು ಪೊಲೀಸರು ವಶಕ್ಕೆ