ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿ ಆಯಿಲ್ ಚೆಲ್ಲಿದ್ದ ಹಿನ್ನೆಲೆಯಲ್ಲಿ ಹಲವು ಮಂದಿ ಬೈಕ್ ಸವಾರರು ಸ್ಕೀಡ್ ಆಗಿ ಬಿದ್ದ ಘಟನೆ ನಡೆದಿದೆ.
ಕಳೆದ ರಾತ್ರಿ ವೇಳೆ ಆಯಿಲ್ ಚೆಲ್ಲಿದೆ ಎನ್ನಲಾಗಿದೆ. ಘಟನೆ ಸಂಬಂಧ ಬೆಂಗಳೂರಿನ ಚಿಕ್ಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಲ್ಲದೇ ಆಯಿಲ್ ಚೆಲ್ಲಿರುವ ಜಾಗದಲ್ಲಿ ಮಣ್ಣು ಹಾಕಿ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.