Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಅರಮನೆ TDR ಪ್ರಕರಣ: ರಾಜ್ಯ ಸರ್ಕಾರದಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ನಿರ್ಧಾರ
KARNATAKA

ಬೆಂಗಳೂರು ಅರಮನೆ TDR ಪ್ರಕರಣ: ರಾಜ್ಯ ಸರ್ಕಾರದಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ನಿರ್ಧಾರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.

ಈ ಹಿಂದೆ ಮಾನ್ಯ ಉಚ್ಛ ನ್ಯಾಯಾಲಯ ಅನುಮೋದಿಸಿದ ಕರ್ನಾಟಕ ವಿಧಾನ ಮಂಡಲ ಅಂಗೀಕರಿಸಿದ ಅಧಿನಿಯಮವನ್ನು ಎತ್ತಿಹಿಡಿಯಲು 1997ರಲ್ಲಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಈಗಾಗಲೇ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಸಚಿವ ಸಂಪುಟ ಸಭೆಯ ನಂತರ ಸಂಪುಟದ ನಿರ್ಣಯದ ಕುರಿತು ವಿವರಿಸಿದರು.

ಮಾನ್ಯ ಸರ್ವೋಚ್ಛ ನ್ಯಾಯಾಲಯವು ದಿನಾಂಕ: 10.02.2024ರ ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗಧಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿತು. ನ್ಯಾಯಾಂಗ ನಿಂದನೆ ಅರ್ಜಿಯ ವಿಷಯದಲ್ಲಿ ಕಾನೂನಿನ ಪ್ರಕಾರ ಅಗತ್ಯ ಕ್ರಮ ವಹಿಸಲು ಸಚಿವ ಸಂಪುಟವು ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸಿತು.

ಮಾನ್ಯ ಸರ್ವೋಚ್ಛ ನ್ಯಾಯಾಲಯದ ದಿನಾಂಕ: 21.12.2014ರ ಆದೇಶಾನುಸಾರ ರೂ.2,83,500 ಪ್ರ.ಚ.ಮೀಟರ್‌ಗೆ (ಬಳ್ಳಾರಿ ರಸ್ತೆ) ಮತ್ತು ರೂ.2,04,000 ಪ್ರ.ಚ.ಮೀಟರ್‌ಗೆ ವನ್ನು (ಜಯಮಹಲ್ ರಸ್ತೆ) ಮೌಲ್ಯದಂತೆ ಟಿ.ಡಿ.ಆರ್ ವನ್ನು ನೀಡಲು ಅಂದಾಜು ರೂ.3011.00 ಕೋಟಿಗಳ ಆರ್ಥಿಕ ಹೊರೆ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ಸಹ ಅದನ್ನು ತಿರಸ್ಕರಿಸಲಾಗಿರುತ್ತದೆ.

ಅಲ್ಲದೇ, ಮಾನ್ಯ ಸರ್ವೋಚ್ಛ ನ್ಯಾಯಾಲಯದ 2001ರ ಆದೇಶವನ್ನು ಉಲ್ಲಂಘಿಸಿ ಸುಮಾರು ಬೆಂಗಳೂರು ಅರಮನೆಯ 2 ಲಕ್ಷ ಚ.ಮೀಟರ್ ವ್ಯಾಪ್ತಿಯಲ್ಲಿ ಖಾಯಂ ಕಟ್ಟಡಗಳನ್ನು ನಿರ್ಮಿಸಿರುವ ಮಹಾರಾಜರ ಉತ್ತರಾಧಿಕಾರಿಗಳ ಮೇಲೆ ನ್ಯಾಯಾಂಗದ ನಿಂದನೆ ಅರ್ಜಿಯನ್ನು ಸಲ್ಲಿಸಲು ಸಹ ಸಚಿವ ಸಂಪುಟ ತೀರ್ಮಾನಿಸಿದೆ. 15 ದಿನಗಳಲ್ಲಿ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವ ಬಗ್ಗೆ ದಿನಾಂಕ: 09.01.2025ರಂದು ಸರ್ಕಾರದ ವತಿಯಿಂದ ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.

ಇಂತಹ ಸ್ಥಳದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರದಿಂದ ಇನ್ನೂಮುಂದೆ ಅನುಮತಿ ನೀಡಲು ಸಚಿವ ಸಂಪುಟ ನಿರ್ಬಂಧ ವಿಧಿಸಿದೆ.

ಕರ್ನಾಟಕ ರಾಜ್ಯವು ಬೆಂಗಳೂರು ಅರಮನೆ (ಭೂಸ್ವಾಧಿನ ಮತ್ತು ವರ್ಗಾವಣೆ) ಅಧಿನಿಯಮ, 1996  ಎಂದು ಕರೆಯಲ್ಪಡುವ ಶಾಸನವನ್ನು ಅಧಿನಿಯಮಿಸಿ ದಿನಾಂಕ: 21.11.1996 ರಿಂದ ಜಾರಿಗೆ ಬರುವಂತೆ ಬೆಂಗಳೂರು ಅರಮನೆಗೆ ಸೇರಿದ ಎಲ್ಲಾ ಸ್ಥಿರ ಚರ ಸ್ವತ್ತುಗಳ (ಕಾಯ್ದೆಯಲ್ಲಿ ನಿರ್ಧಿಷ್ಟಪಡಿಸಲಾದ ಸ್ವತ್ತುಗಳು) ಎಲ್ಲಾ ವಿಧವಾದ ಹಕ್ಕು ರಾಜ್ಯ ಸರ್ಕಾರದಲ್ಲಿ ವಿಹಿತವಾಗುತ್ತದೆ ಎಂದು ತಿಳಿಸಲಾಗಿತ್ತು.

ಈ ಅಧಿನಿಯಮವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಂಖ್ಯೆ: 3383/1997 ರಲ್ಲಿ ಮತ್ತು ಇತರೆ ಸಂಬಂಧಿತ ವಿಷಯಗಳಲ್ಲಿ ಕರ್ನಾಟಕದ ಉಚ್ಛ ನ್ಯಾಯಾಲಯದ ಮುಂದೆ ಪ್ರಶ್ನಿಸಿದ ಸಂದರ್ಭದಲ್ಲಿ ರಾಜ್ಯದ ಶಾಸನದ ಮಾನ್ಯತೆಯನ್ನು ರಾಜ್ಯ ಉಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು.

ರಾಜ್ಯ ಉಚ್ಛ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ವಿಶೇಷ ಅನುಮತಿ ಅರ್ಜಿ (ಸಿವಿಲ್) ಸಂಖ್ಯೆ: 8650/1997ರಲ್ಲಿ ಮತ್ತು ಇತರೆ ಸಂಬೆಧಿತ ವಿಷಯಗಳಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿರುತ್ತಾರೆ. ಸರ್ವೋಚ್ಛ ನ್ಯಾಯಾಲಯವು ಈ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿದೆ. ಈ ಅರ್ಜಿ ವಿಲೆವಾರಿ ಆಗುವವರೆಗೆ ಮಾಲಿಕತ್ವ ಪ್ರಶ್ನೆಯು ಇತ್ಯರ್ಥವಾಗುವವರೆಗೆ ಟಿ.ಡಿ.ಆರ್ ಪ್ರಕರಣವನ್ನು ಕಾನೂನು ಪ್ರಕಾರ ನಿರ್ವಹಿಸಲು ಸಚಿವ ಸಂಪುಟ ನಿರ್ದೇಶಿಸಿದೆ.

ರಾಜ್ಯದಲ್ಲಿ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ‘ಹೊರಗುತ್ತಿಗೆ ನೌಕರ’ರಿಗೆ ಗುಡ್ ನ್ಯೂಸ್

GOOD NEWS: ರಾಜ್ಯ ಸರ್ಕಾರದಿಂದ ‘VA’ಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲ್ಯಾಪ್ ಟಾಪ್’ ವಿತರಣೆಗೆ ಸಚಿವ ಸಂಪುಟ ಅನುಮೋದನೆ

Share. Facebook Twitter LinkedIn WhatsApp Email

Related Posts

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

1 Min Read

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

2 Mins Read

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

1 Min Read
Recent News

ಭಾರತೀಯರು ಚಿನ್ನದ ಮೇಲಿನ ವ್ಯಾಮೋಹ ಏಕೆ ಕಡಿಮೆ ಮಾಡಿಕೊಳ್ಳಬೇಕು? ಪ್ರಧಾನಿ ಮೋದಿ ಕರೆಯ ಹಿಂದಿರುವ ಆರ್ಥಿಕ ರಹಸ್ಯ ಇಲ್ಲಿದೆ

ನಿಮ್ಮ ಲೈಂಗಿಕ ಜೀವನಕ್ಕೆ ಹಾನಿ ಮಾಡುತ್ತಿರುವ 7 ದೈನಂದಿನ ಅಭ್ಯಾಸಗಳಿವು, ಇಂದೇ ಕಡಿಮೆ ಮಾಡಿ

‘ಯಾರೂ ಆತಂಕಕ್ಕೊಳಗಾಗಬೇಡಿ: ಪ್ರಧಾನಿ ಮೋದಿ ಕರೆಗೆ ತಪ್ಪು ಅರ್ಥ ಬೇಡ; ದೇಶದಲ್ಲಿ ಪೆಟ್ರೋಲ್, ಡೀಸೆಲ್ ದಾಸ್ತಾನು ಸಮೃದ್ಧವಾಗಿದೆ’ ಎಂದ ಕೇಂದ್ರ ಸರ್ಕಾರ

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

State News
KARNATAKA

ಸಂಭ್ರಮಿಸಬೇಕಾದ ಹುಟ್ಟುಹಬ್ಬವೇ ಸಾವಿನ ದಿನವಾಯ್ತು; ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಳಗಾವಿ: ಇಲ್ಲಿನ ಅಜಂ ನಗರದ ವಿದ್ಯಾರ್ಥಿನಿಲಯದಲ್ಲಿ ಯುವತಿಯೊಬ್ಬಳು ತನ್ನ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ಮೃತ ಯುವತಿಯನ್ನು…

Scam Alert: ವಾಟ್ಸ್ ಆಪ್ ನಲ್ಲಿ ಬರೋ ಮದುವೆ ಆಮಂತ್ರಣ ಪತ್ರಿಕೆ ಕ್ಲಿಕ್ ಮಾಡೋ ಮುನ್ನಾ ಈ ಸುದ್ದಿ ಓದಿ! | Wedding Invitation APK Scam

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.