ಬೆಂಗಳೂರು : ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರಿನ ಜನ ಹನಿ ನೀರಿಗೂ ಪರದಾಡುವಂತಹ ಪರಿಸರ ಎದುರಾಗಿದೆ ಇದರ ಬೆನ್ನಲ್ಲೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಇನ್ನು ಮುಂದೆ ಎಲ್ಲೇ ಕೊಳವೆಬಾವಿ ಕೊರೆಸಬೇಕಾದರೂ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಇಲ್ಲವಾದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದೆ.
ಬೆಂಗಳೂರು ಗ್ರಾ. ಕ್ಷೇತ್ರಕ್ಕೆ ಡಾ ಮಂಜುನಾಥ್ ಸ್ಪರ್ಧೆ ಫಿಕ್ಸ್ : ಮನವೊಲಿಸುವಲ್ಲಿ ಯಶಸ್ವಿಯಾದ HD ಕುಮಾರಸ್ವಾಮಿ
ನಗರದಲ್ಲಿ ಇನ್ನು ಮುಂದೆ ಕಡ್ಡಾಯವಾಗಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಕೊಳವೆ ಬಾವಿ ಕೊರೆಯಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಚ್ಚರಿಕೆ ನೀಡಿದೆ.
1 ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಿ ಮೋದಿ
ನಗರದಲ್ಲಿ ಮಳೆ ಕೊರತೆ ಉಂಟಾಗಿಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಅಂರ್ತಜಲ ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡು ಆದೇಶ ಹೊರಡಿಸಲಾಗಿದೆ. ಅನುಮತಿ ಪಡೆಯದೇ ಕೊಳವೆ ಬಾವಿ ಕೊರೆದರೆ ದೂರು ದಾಖಲಿಸಿ ಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು.ವೈಯಕ್ತಿಕ ಮತ್ತು ಇತರೆ ಬಳಕೆ ಕೊಳವೆ ಬಾವಿ ಎರಡಕ್ಕೂ ಈ ನಿಯಮ ಅನ್ವಯವಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷರು ಆದೇಶದಲ್ಲಿ ತಿಳಿಸಿದ್ದಾರೆ.
ಭಾರತವನ್ನು ಜಾಗತಿಕ ಸೂಪರ್ ಪವರ್ ಮಾಡಲು ‘ತ್ರಿಶೂಲ್’ ಮಾದರಿಯನ್ನು ಪ್ರತಿಪಾದಿಸಿದ ‘ಆನಂದ್ ಮಹೀಂದ್ರಾ’
15ರಿಂದ ಅರ್ಜಿ ವಿತರಣೆ
ಈ ಆದೇಶ ಮಾ.15ರಿಂದ ಜಾರಿಗೆ ಬರಲಿದ್ದು, ಅಂದಿನಿಂದಲೇ ಬೆಂಗಳೂರು ಜಲಮಂಡಳಿ ವೆಬ್ ಸೈಟ್‌ನಲ್ಲಿ ಅರ್ಜಿ ವಿತರಿಸಲಾಗುವುದು. ಸಾರ್ವಜನಿಕ ಕೊಳವೆ ಬಾವಿಗೆ ಮೊದಲ ಆದ್ಯತೆ ನೀಡಲಾಗುವುದು. ಖಾಸಗಿ ಕೊಳವೆ ಬಾವಿಗಳಿಗೆ ಅಂತರ್ಜಲ ಮಟ್ಟ, ಅವಶ್ಯಕತೆ, ತಜ್ಞರ ವರದಿ ಆಧಾರಿಸಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ನಂತರ ಅನುಮತಿ ನೀಡಲಾಗುತ್ತದೆ.
ಇನ್ನು ಕೊಳವೆ ಬಾವಿ ಕೊರೆಯು ವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊರೆಯಬೇಕು. ಒಂದು ವೇಳೆ ಅನುಮತಿ ಪಡೆಯದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.