ಬೆಂಗಳೂರು: ನಗರದಲ್ಲಿ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಉದ್ಯಮಿಯೊಬ್ಬರ ವಿರುದ್ಧದ ಕೇಸ್ ಮುಚ್ಚಿ ಹಾಕಲು 1.50 ಕೋಟಿ ಹಣವನ್ನು ಪಡೆದಿದ್ದಂತ ಐವರು ಜಿಎಸ್ಟಿ ಅಧಿಕಾರಿಗಳು ನಾಪತ್ತೆಯಾಗಿದ್ದರು. ಈ ಸಂಬಂಧ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು.
ಈ ದೂರು ಆಧರಿಸಿ ಕಾರ್ಯಾಚರಣೆಗೆ ಇಳಿದಂತ ಪೊಲೀಸರು ಮಹಿಳಾ ಅಧಿಕಾರಿ ಸೇರಿದಂತೆ ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬೈಯ್ಯಪ್ಪನಹಳ್ಳಿ ಠಾಣೆಯ ಪೊಲೀಸರು 1.50 ಕೋಟಿ ಹಣ ಪಡೆದು ಪರಾರಿಯಾಗಿದ್ದಂತ ಐವರು ಅಧಿಕಾರಿಗಳನ್ನು ಅರೆಸ್ಟ್ ಮಾಡಿದೆ.
ಅಂದಹಾಗೇ ಉದ್ಯಮಿಯ ವಿರುದ್ಧ ಏನಿತ್ತು ಕೇಸ್? ಅವರು ಅಷ್ಟೊಂದು ಹಣ ಕೊಟ್ಟಿದ್ದೇಕೆ? ಸೇರಿದಂತೆ ಇತರೆ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಈ ಸಂಬಂಧ ಪೊಲೀಸರಿಂದ ತನಿಖೆ ನಡೆಯುತ್ತಿದ್ದು, ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!