ಬೆಂಗಳೂರು: ನಗರ ಪೊಲೀಸ್ ಆಯಕ್ತ ಬಿ.ದಯಾನಂದ ಅವರು ನೇತ್ರದಾನಕ್ಕೆ ಒಪ್ಪಿಗೆ ನೀಡುವ ಮೂಲಕ ಪೊಲೀಸ್ ಇಲಾಖೆಯ ಇತರೆ ಹಿರಿಯ ಮತ್ತು ಕಿರಿಯ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ.
ನಾರಾಯಣ ನೇತ್ರಾಲಯದ ಡಾ.ರಾಜ್ ಕುಮಾರ್ ನೇತ್ರದಾನಕ್ಕೆ ದಯಾನಂದ ಅವರು ತಮ್ಮ ಕಣ್ಣು ದಾನ ಮಾಡಿದ್ದಾರೆ. ಈ ಹಿನ್ನೆಲೆ ನಾರಾಯಣ ನೇತ್ರಾಲಯದಿಂದ ಆಯುಕ್ತರಿಗೆ ಪ್ರಶಂಸನಾ ಪತ್ರ ನೀಡಲಾಗಿದೆ. ಜೊತೆಗೆ ‘ಹೊಸ ವರ್ಷದ ಶುಭ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ನ ಅಧಿಕಾರಿಗಳು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ’ ಎಂದು ಆಯುಕ್ತರು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.