ಮದ್ಯಪಾನ ಮಾಡಿ ವಾಹನ ಚಲಾಯಿಸಿದವರಿಗೆ ಬೆಂಗಳೂರು ಪೊಲೀಸರ ಶಾಕ್: 177 ಕೇಸ್ ದಾಖಲು

ಬೆಂಗಳೂರು: ನಗರದಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಕುಡಿದು ವಾಹನ ಚಾಲನೆ ಮಾಡಿದಂತ 177 ಮಂದಿ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಪೂರ್ವ ವಿಭಾಗದ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 21-11-2024ರಿಂದ 24-11-2024ರವರೆಗೆ ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಮದ್ಯಪಾನ ಮಾಡಿ ವಾಹನಗಳನ್ನು ಚಾಲನೆ ಮಾಡುವ ಚಾಲಕ, ಸವಾರರುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಯಿತು … Continue reading ಮದ್ಯಪಾನ ಮಾಡಿ ವಾಹನ ಚಲಾಯಿಸಿದವರಿಗೆ ಬೆಂಗಳೂರು ಪೊಲೀಸರ ಶಾಕ್: 177 ಕೇಸ್ ದಾಖಲು