ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಬೆಸ್ಕಾಂನ ವಿವಿಧ ಉಪ ವಿಭಾಗಗಳಿಂದ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ದಿನಾಂಕ 18-08-2024ರ ನಾಳೆ ಹಾಗೂ ದಿನಾಂಕ 19-08-2024ರ ನಾಡಿದ್ದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.
ಆಗಸ್ಟ್.18ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಈ ಕುರಿತಂತೆ ಬೆಸ್ಕಾಂನಿಂದ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ ದಿನಾಂಕ 18.08.2024 ರಂದು 09:30ಗಂಟೆಗಳಿಂದ 15:30ಗಂಟೆಗಳವರೆಗೆ ತ್ರೈಮಾಸಿಕ ನಿರ್ವಹಣೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಮ್‌ಟಿಐ, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಎಂಇಸಿ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ . ರಾಜೇಶ್ವರಿನಗರ, ಆಕಾಶ್ ಥೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6 ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5 ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7 ನೇ ಮುಖ್ಯ ರಸ್ತೆ, 3 ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್‌ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ಆಗಸ್ಟ್.19ರ ನಾಡಿದ್ದು ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ
66/11ಕೆವಿ ಅಟ್ಟೂರುಯಲಹಂಕ ಎಂ ಯು ಎಸ್ ಎಸ್ ದಿನಾಂಕ 19.08.2024 ರಂದು 10:30ಗಂಟೆಗಳಿಂದ 18:00ಗಂಟೆಗಳವರೆಗೆ ತುರ್ತು ನಿರ್ವಹಣೆ ಕೆಲಸ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಕೆ.ಎಂ.ಎಫ್. ಮದರ್ ಡೈರಿ, ಎಸ್.ಎಫ್.ಎಸ್ 208, ಎಸ್.ಎಫ್.ಎಸ್ 407, ಉನ್ನಿಕೃಷ್ಣನ್ ರಸ್ತೆ, ಬಿ ಸೆಕ್ಟರ್, ಎನ್.ಇ.ಎಸ್ ರಸ್ತೆ, ಸಿ.ಎಂ ಎನ್ಕ್ಲೇವ್, ಮಾತೃ ಲೇಔಟ್, ಸೋಮೇಶ್ವರನಗರ, ಕನಕನಗರ, ನ್ಯಾಯಾಂಗ ಬಡಾವಣೆ, ಯಲಹಂಕ ಓಲ್ಡ್ ಟೌನ್, ಗಾಂಧಿ ನಗರ, ಹಳೆಯ ಪಟ್ಟಣ ಬಿಬಿಎಂಪಿ ರಸ್ತೆ, ಕೆರೆ, ಬಿಬಿಎಂಪಿ ರಸ್ತೆ ಕೋಡಿ ರೋಡ್, ಪುರವಂಕರ, ಅಪಾರ್ಟ್ಮೆಂಟ್ ಆರ್.ಎಂ.ಝಡ್ ಮಾಲ್, ಆರ್.ಎಂ.ಝಡ್ ರೆಸಿಡೆನ್ಸಿಯಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ