ಬೆಂಗಳೂರು: ಪ್ರತಿ ವರ್ಷ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವಿವಿಧ ಸಾಧಕರಿಗೆ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ. ಈ ಬಾರಿಯೂ 2022ನೇ ಸಾಲಿನ ಪ್ರಶಸ್ತಿಗಳ ಪಟ್ಟಿಯನ್ನು ಪ್ರಕಟಿಸಿದೆ. 2022ನೇ ಸಾಲಿನ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ನೀಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಪ್ರಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್ ಮಾಹಿತಿ ಬಿಡುಗಡೆ ಮಾಡಿದ್ದು, 2022ನೇ ಸಾಲಿನ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿರುವುದಾಗಿ ಹೇಳಿದ್ದಾರೆ.
2022ರ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗುತ್ತಿದೆ. ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ವಿಶೇಷ ಪ್ರಶಸ್ತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರಿಗೆ ನೀಡಲಾಗುತ್ತಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಯನ್ನು ಹೆಚ್ ಆರ್ ಬಲರಾಂ, ಅಗ್ರಹಾರ ಕೃಷ್ಣಮೂರ್ತಿ, ಗಂಗಾಧರ ಮೊದಲಿಯಾರ್, ಚೆನ್ನ ನಾಗರಾಜ್ ಎಂ, ಶ್ರೀಧರ್ ಬಿಎನ್, ವಿನಯ್ ಎಂ, ಹನುಮೇಶ್ ಯಾವಗಲ್, ಶಿವಾನಂದ ತಗಡೂರು ಸೇರಿದಂತೆ ಇತರರಿಗೆ ನೀಡಲಾಗಿದೆ. ಡಿಸೆಂಬರ್ 31ರಂದು ಈ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ಪ್ರೆಸ್ ಕ್ಲಬ್ ನಲ್ಲಿ ಪ್ರದಾನ ಮಾಡಲಾಗುತ್ತದೆ ಎಂದಿದ್ದಾರೆ.