ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್. ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಬೆನ್ನಲ್ಲೇ ಮತ್ತೋರ್ವ ನಟಿ ಆಶಿರಾಯ್ ಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಬೆಂಗಳೂರು ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಟಿ ಹೇಮಾ ಸೇರಿದಂತೆ ಹಲವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇದೀಗ ಮತ್ತೋರ್ವ ನಟಿ ಆಶಿರಾಯ್ ಗೆ ಸಂಕಷ್ಟ ಎದುರಾಗಿದ್ದು, ಜೂನ್ ೧ ರಂದು ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ.
ವಾಸು ಎಂಬಾತನ ಬರ್ತ್ ಡೇ ಪಾರ್ಟಿಗಾಗಿ ಏರ್ಪಡಿಸಲಾಗಿದ್ದ ಈ ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೋ ಗಾಂಜಾ ಪತ್ತೆಯಾಗಿದ್ದವು.
ಪ್ರಕರಣ ಸಂಬಂಧ 6 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.A1 ಆರೋಪಿ ವಾಸು, A2 ಅರುಣ್ ಕುಮಾರ್, A3 ನಾಗಬಾಬು, A4 ರಣಧೀರ್ ಬಾಬು, A5 ಮೊಹಮ್ಮದ್ ಅಬೂಬಕ್ಕರ್, A6 ಗೋಪಾಲ ರೆಡ್ಡಿ ಹಾಗೂ A7 68 ಜನ ಪುರುಷರು ಹಾಗೂ A8 30 ಯುವತಿಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.