ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ರಾವ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆಲುಗು ನಟಿ ಹೇಮಾ ಸೇರಿ 8 ಆರೋಪಿಗಳಿಗೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿತ್ತು ಇದೀಗ ಇಂದು ಮತ್ತೆ ಆರೋಪಿಗಳಿಗೆ ಸಿಸಿ ಬೇಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆಲುಗು ನಟಿ ಹೇಮಾ ಸೇರಿ 8 ಜನರಿಗೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿತ್ತು. ಆದರೆ ಹೇಮಾ ಸೇರಿದಂತೆ ಕೆಲವರು ವಿಚಾರಣೆಗೆ ಹಾಜರಾಗಿಲ್ಲ.ಹಾಗಾಗಿ ಇದೀಗ ಎಲ್ಲರಿಗೂ ಎರಡನೇ ಬಾರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಿನ್ನೆ ವಿಚಾರಣೆಗೆ ಆರೋಪಿಗಳು ಗೈರಾಗಿರುವ ಹಿನ್ನೆಲೆಯಲ್ಲಿ ಇದೀಗ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡುವಂತಹ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.