ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ತೆಲುಗು ನಟಿ ಹೇಮಾ ಹಾಜರಾಗಿದ್ದಂತ ಅವರನ್ನು ವಿಚಾರಣೆಗೆ ಒಳಪಡಿಸಿದ್ದಂತ ಸಿಸಿಬಿ ಪೊಲೀಸರು, ಬಂಧಿಸಿದ್ದರು. ಆ ಬಳಿಕ ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು ಜೂನ್.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆಗಾಗಿ 24 ಗಂಟೆ ಸಿಸಿಬಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಸಲಾಗಿದ್ದಂತ ರೇವ್ ಪಾರ್ಟಿ ಸಂಬಂಧ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಯ ಬಳಿಕ ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಂತ ಅವರನ್ನು ಬೆಂಗಳೂರು ನಗರದ ಆನೇಕಲ್ ನಲ್ಲಿರುವಂತ ಆನೇಕಲ್ ನ 4ನೇ ಸಿವಿಲ್, ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಧೀಶರ ಮುಂದೆ ಹಾಜರುಪಡಿಸಿದ್ದರು.
ಬೆಂಗಳೂರಿನ ರೇವ್ ಪಾರ್ಟಿ ಪ್ರಕರಣ ಸಂಬಂಧ ಆನೇಕಲ್ ನ 4ನೇ ಸಿವಿಲ್, ಜೆಎಂಫ್ ಸಿ ನ್ಯಾಯಾಲಯದ ನ್ಯಾಯಮೂರ್ತಿ ಸಲ್ಮಾ ಎ ಎಸ್ ಅವರು ವಿಚಾರಣೆ ನಡೆಸಿ, ನಟಿ ಹೇಮಾ ಅವರಿಗೆ ಈ ಹಿಂದೆ ಜೂನ್.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿದ್ದರು.
ಸಿಸಿಬಿ ಪೊಲೀಸರು ತೆಲುಗು ನಟಿ ಹೇಮಾ ಹೆಚ್ಚಿನ ವಿಚಾರಣೆಗೆ ನಡೆಸೋದಕ್ಕೆ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ ಆನೇಕಲ್ ತಾಲೂಕಿನ 4ನೇ ಸಿವಿಲ್, ಜೆಎಂಎಫ್ ಸಿ ನ್ಯಾಯಾಲಯದಾ ನ್ಯಾಯಾಧೀಶೆ ಎಎಸ್ ಸಲ್ಮಾ ವಿಚಾರಣೆ ನಡೆಸಿದರು. ತೆಲುಗು ನಟಿ ಹೇಮಾಳನ್ನು ಹೆಚ್ಚಿನ ವಿಚಾರಣೆಗಾಗಿ 24 ಗಂಟೆಗಳ ಕಾಲ ಸಿಸಿಬಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.
Watch Video : ಒಂದೇ ವಿಮಾಣದಲ್ಲಿ ಒಟ್ಟಿಗೆ ಪ್ರಯಾಣಿಸಿದ ನಿತೀಶ್ ಕುಮಾರ್-ತೇಜಸ್ವಿ ಯಾದವ್! ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಸಂಕಷ್ಟಕ್ಕೆ ಸಿಲುಕಿದ ‘ಕನ್ನಡಿಗ’ರ ನೆರವಿಗಾಗಿ ‘IAS ಅಧಿಕಾರಿ ವಿಪುಲ್ ಬನ್ಸಾಲ್’ ನೇಮಕ