ಬೆಂಗಳೂರು: ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಸೆ.15 ರಿಂದ 3 ದಿನ 3 ದಿನ ಪೂರೈಕೆಯಲ್ಲಿ ನೀರು ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದಾರೆ. ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆಪ್ಟೆಂಬರ್ 15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.
ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲ ವ್ಯತ್ಯಯ
ಕಾವೇರಿ 5ನೇ ಹಂತ – ಸೆಪ್ಟೆಂಬರ್ 15 ರ ಬೆಳಗ್ಗೆ 1 ರಿಂದ ಸೆಪ್ಟೆಂಬರ್ 17 ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳು.
ಕಾವೇರಿ ಹಂತ 1, 2, 3, 4 ರಲ್ಲಿ – ಸೆಪ್ಟೆಂಬರ್ 16 ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 17 ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳು.
3 ದಿನ ಕಾವೇರಿ ನೀರು ವ್ಯತ್ಯಯದ ಹಿನ್ನೆಲೆಯಲ್ಲಿ ನೀರನ್ನು ಸಂಗ್ರಹಿಸಲು ನಾಗರಿಕರಿಗೆ ಸೂಚನೆ ನೀಡಲಾಗಿದ್ದು, ನಿವಾಸಿಗಳು ಮುಂಚಿತವಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದೆ.