ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಬೈಕ್ ನಲ್ಲಿ ತೆರಳುತ್ತಿದ್ದಂತ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಂತ ಹೈದರ್ ಆಲಿ ಎಂಬಾತನೇ ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಸಾವನ್ನಪಿದಂತವರಾಗಿದ್ದಾರೆ. ಈತ 2014ರಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. 11 ಪ್ರಕರಣಗಳು ಈತನ ಮೇಲಿದ್ದಾವೆ.
2022ರ ನಂತ್ರ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದ ಈತ, ರಾಜಕೀಯ ಪಕ್ಷವೊಂದರಲ್ಲಿ ಗುರುತಿಸಿಕೊಂಡಿದ್ದನು. ತಡರಾತ್ರಿ ಸ್ನೇಹಿತರೊಂದಿಗೆ ಬಾರ್ ಅಂಡ್ ರೆಸ್ಟೋರೆಂಟ್ ನಿಂದ ಹೊರ ಬಂದು, ಆನೆಪಾಳ್ಯದಲ್ಲಿರುವಂತ ಮನೆಗೆ ಕಾರಿನಲ್ಲಿ ಹೊರಟಿದ್ದರು.
ಈ ವೇಳೆಯಲ್ಲಿ ಬೈಕ್ ನಲ್ಲಿ ಬಂದಂತ ದುಷ್ಕರ್ಮಿಗಳು ಕಾರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಂತ ಅವರನ್ನು ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ನಿನ್ನೆ ತಡರಾತ್ರಿ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Watch Video: ಹಮಾಸ್ ಸೈನಿಕನ ಹಣೆಗೆ ಮುತ್ತಿಟ್ಟ ಬಿಡುಗಡೆಗೊಂಡ ಇಸ್ರೇಲಿ ಒತ್ತೆಯಾಳು | Israel-Hamas war