ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಏಪ್ರಿಲ್.4ರಂದು ನಾಮಪತ್ರ ಸಲ್ಲಿಸುವುದಾಗಿ ಡಾ.ಸಿಎನ್ ಮಂಜುನಾಥ್ ಘೋಷಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಸಿದ್ಧಗಂಗಾ ಶ್ರೀ ಗದ್ದುಗೆಗೆ ಪೂಜೆ ಸಲ್ಲಿಸಿ, ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಏಪ್ರಿಲ್.4ರಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಬೃಹತ್ ರ್ಯಾಲಿಯ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸೋದಾಗಿ ತಿಳಿಸಿದರು.
ಬೆಂಗಳೂರು ಗ್ರಾಮಾಂತರದಲ್ಲಿ ಕುಕ್ಕರ್ ಹಂಚಿಕೆ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದಂತ ಅವರು, ಚುನಾವಣಾ ಆಯೋಗ ಈ ಬಗ್ಗೆ ಕ್ರಮ ಕೈಗೊಳ್ಳುತ್ತದೆ. ಈಗಾಗಲೇ ಕುಕ್ಕರ್ ಹಂಚಿಕೆ ಆರೋಪ ಸಂಬಂಧ ಎಫ್ಐಆರ್ ದಾಖಲಾಗಿದೆ ಎಂದರು.
‘ತೆರಿಗೆ ನಿಯಮ’ದಲ್ಲಿ ಯಾವುದೇ ಹೊಸ ಬದಲಾವಣೆಯಿಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ | New Tax Rules
ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿರುವ ಈ ‘ನಿಯಮ’ಗಳು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತವೆ!