ಬೆಂಗಳೂರು : ಸಕಾಲ ಸೇವೆ ಅನುಷ್ಠಾನದಲ್ಲಿ ಬೆಂಗಳೂರು ಗ್ರಾಮಾಂತರ ಪ್ರಥಮ ಸ್ಥಾನ ಪಡೆದಿದೆ ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್ ಸಕಾಲ ಸೇವೆ ಅನುಷ್ಠಾನದಲ್ಲಿ ಬೆಂಗಳೂರು ಗ್ರಾಮಾಂತರ ಪ್ರಥಮ ಸ್ಥಾನ ಪಡೆದಿದೆ. ಚಿಕ್ಕಬಳ್ಳಾಪುರ 2ನೇ ಸ್ಥಾನ ಪಡೆದಿದೆ ಎಂದು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ನಿಗದಿತ ಕಾಲಮಿತಿಯೊಳಗೆ ಅರ್ಜಿಗಳು ವಿಲೇವಾರಿಯಾಗುವುದರಿಂದ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಪದೇ ಪದೇ ಅಲೆಯುವುದು ತಪ್ಪುತ್ತದೆ. ಹಾಗೂ ಆಡಳಿತವು ಪಾರದರ್ಶಕವಾಗಿ ನಡೆಯಲು ಈ ಯೋಜನೆ ಸಹಕಾರಿಯಾಗಿದೆ.
ಸಕಾಲ ಸೇವೆ ಅನುಷ್ಠಾನದಲ್ಲಿ ನನ್ನ ಉಸ್ತುವಾರಿ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಪ್ರಥಮ ಸ್ಥಾನ ಪಡೆದಿದ್ದು, ಚಿಕ್ಕಬಳ್ಳಾಪುರ 2ನೇ ಸ್ಥಾನ ಪಡೆದಿದೆ.
ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸಲು ಶ್ರಮಿಸಿದ ಎರಡೂ ಜಿಲ್ಲೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆಗಳು. pic.twitter.com/wlwNHt2pJY
— Dr Sudhakar K (@mla_sudhakar) January 2, 2023
BIGG NEWS: ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತನಿಗೆ ಗಂಭೀರ ಗಾಯ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
‘ಬಿಜೆಪಿ’ ಎಂದರೆ ಮೂರೂ ಬಿಟ್ಟಿರುವ ಪಕ್ಷ : ಟ್ವೀಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ