ಬೆಂಗಳೂರು: ಸಕಾಲ ಯೋಜನೆ ಅನುಷ್ಠಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ, ಈ ಬಾರಿ ಪ್ರಥಮ ಸ್ಥಾವನ್ನು ಗಳಿಸಿದೆ. ಈ ಯೋಜನೆಯ ಅನುಷ್ಠಾನದಲ್ಲಿ ಹಾವೇರಿ ಕೊನೆಯ ಹಂತವನ್ನು ತಲುಪಿದೆ.
ಈ ಬಗ್ಗೆ ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಸಕಾಲ ಸೇವೆ ಅನುಷ್ಠಾನದಲ್ಲಿ ನನ್ನ ಉಸ್ತುವಾರಿ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಪ್ರಥಮ ಸ್ಥಾನ ಪಡೆದಿದ್ದು, ಚಿಕ್ಕಬಳ್ಳಾಪುರ 2ನೇ ಸ್ಥಾನ ಪಡೆದಿದೆ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸಲು ಶ್ರಮಿಸಿದ ಎರಡೂ ಜಿಲ್ಲೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಸಕಾಲ ಸೇವೆ ಅನುಷ್ಠಾನದಲ್ಲಿ ನನ್ನ ಉಸ್ತುವಾರಿ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಪ್ರಥಮ ಸ್ಥಾನ ಪಡೆದಿದ್ದು, ಚಿಕ್ಕಬಳ್ಳಾಪುರ 2ನೇ ಸ್ಥಾನ ಪಡೆದಿದೆ.
ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ಒದಗಿಸಲು ಶ್ರಮಿಸಿದ ಎರಡೂ ಜಿಲ್ಲೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆಗಳು. pic.twitter.com/wlwNHt2pJY
— Dr Sudhakar K (@mla_sudhakar) January 2, 2023
ಇನ್ನೂ ಮೊದಲ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇದ್ದರೇ, ಎರಡನೇ ಸ್ಥಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಬೆಳಗಾವಿ, 4 ಧಾರವಾಡ, 5 ಕೊಪ್ಪಳ, 6 ವಿಜಯಪುರ, 7 ಉತ್ತರ ಕನ್ನಡ, 8 ತುಮಕೂರು, 9 ವಿಜಯನಗರ ಹಾಗೂ 10ನೇ ಸ್ಥಾನವನ್ನು ಬೀದರ್ ಜಿಲ್ಲೆ ಪಡೆದುಕೊಂಡಿವೆ.
HEALTH TIPS: ಊಟದ ನಂತರ ಹೊಟ್ಟೆ ಉಬ್ಬಿದಂತಾಗುತ್ತದೆಯೇ? ಈ ಕಾಯಿಲೆ ತಪ್ಪಿದ್ದಲ್ಲ