ಬೆಂಗಳೂರು : ಮನೆ ಮುಂದೆ ಸ್ವಚ್ಛತೆಯ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದ ಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಹೌದು ಮನೆಯ ಮುಂದೆ ಸ್ವಚ್ಛತೆಯ ವಿಚಾರವಾಗಿ ಗಲಾಟೆ ಶುರುವಾಗಿದೆ. ಈ ವೇಳೆ ಪೌರಕಾರ್ಮಿಕರಾದ ಸಿ. ಮಂಜುನಾಥ ಹಾಗೂ ಕೆ ಆರ್ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಪೌರಕಾರ್ಮಿಕರ ಮೇಲೆ ಹಿತೇಶ್ ಹಾಗೂ ಜಯಂತ್ ಎನ್ನುವವರು ಹಲ್ಲೆ ನಡೆಸಿದ್ದಾರೆ.ಸ್ವಚ್ಛತೆಗೆ ದಿನನಿತ್ಯ ಬರುವುದಿಲ್ಲವೆಂದು ವಾಗ್ವಾದ ನಡೆಸಿ ಬಳಿಕ ಹಲ್ಲೆ ಮಾಡಿದ್ದಾರೆ. ಘಟನೆ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .