ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಾಡಬಾಂಬ್ ತಯಾರಿಸುವಂತ ವೇಳೆಯಲ್ಲಿ ಸ್ಪೋಟಗೊಂಡ ಪರಿಣಾಮ, ಮಗ ಸಾವನ್ನಪ್ಪಿ ತಂದೆ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸುತ್ತುವಾಗ ಸ್ಪೋಟಗೊಂಡಿದೆ. ನಾಡಬಾಂಬ್ ಸ್ಪೋಟಗೊಂಡ ಪರಿಣಾಮ ಪವನ್(19) ಎಂಬುವರು ಸಾವನ್ನಪ್ಪಿದ್ದರೇ, ಅವರ ತಂದೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಡಬಾಂಬ್ ಸ್ಪೋಟಗೊಂಡ ಪರಿಣಾಮ ಮನೆ ಛಿದ್ರ ಛಿದ್ರಗೊಂಡಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ತಯಾರಿಸುತ್ತಿದ್ದಂತ ನಾಡ ಬಾಂಬ್ ಇದಾಗಿದೆ ಎನ್ನಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಹೊಸಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಿವೇಶನ ಲೂಟಿ ಮಾಡುತ್ತಿರುವುದು ನಾನಾ ನೀವಾ?: ಎಂ.ಬಿ.ಪಾಟೀಲರಿಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
ಬ್ಯಾಂಕ್ ಗ್ರಾಹಕರೇ ಗಮನಿಸಿ : `ಸೆಪ್ಟೆಂಬರ್’ ತಿಂಗಳಲ್ಲಿ ಬ್ಯಾಂಕುಗಳಿಗೆ 15 ದಿನ ರಜೆ!Bank Holidays