ಬೆಂಗಳೂರು: ತನ್ನ ಜೀವನದ ಅಡೆತಡೆಗಳನ್ನು ನಿವಾರಿಸುವ ನೆಪದಲ್ಲಿ ಆಧ್ಯಾತ್ಮಿಕ ಗುರು ಎಂದು ಕರೆಯಲ್ಪಡುವವರು ತನ್ನ ಮೇಲೆ ಏಳು ವರ್ಷಗಳಿಂದ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿಯೊಬ್ಬರು ಆರೋಪಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತೆ ಸೋಮವಾರ ಬೆಂಗಳೂರಿನಲ್ಲಿ ದೂರು ದಾಖಲಿಸಿದ್ದಾರೆ.
ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ವಯಂ ಘೋಷಿತ ಗುರು ಆನಂದ ಮೂರ್ತಿ ಮತ್ತು ಅವರ ಪತ್ನಿ ಲತಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದೀಗ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ವರದಿಯ ಪ್ರಕಾರ, ಏಳು ವರ್ಷಗಳ ಹಿಂದೆ ತನ್ನ ಸ್ನೇಹಿತೆಯ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಪಿಗೆ ಯುವತಿ ಪರಿಚಯವಾಗಿದೆ. ಈ ವೇಳೆ ತನ್ನ ಕಷ್ಟವನ್ನು ಗುರೂಜಿ ಬಳಿ ಹೇಳಿಕೊಂಡಿದ್ದಾಳೆ. ಆಧ್ಯಾತ್ಮಿಕ ಗುರು ಎಂದು ಕರೆಯಲ್ಪಡುವ ಆನಂದ ಮೂರ್ತಿ ಯುವತಿಯ ಜೀವನದ ಸಮಸ್ಯೆಗಳನ್ನು ಪರಿಹರಿಸಿಕೊಡುವುದಾಗಿ ಹೇಳಿದ್ದಾನೆ. ಈತನ ಮಾತನ್ನು ನಂಬಿದ ಯುವತಿ ಆಗಾಗ್ಗೆ ವಿಶೇಷ ಪೂಜೆ ಸಲ್ಲಿಸಲು ಆರೋಪಿಯ ಮನೆಗೆ ತೆರಳುತ್ತಿದ್ದಳು. ಈ ವೇಳೆ ತನಗೆ ಗುರೂಜಿ ಪಾನೀಯವನ್ನು ನೀಡುತ್ತಿದ್ದರು. ಅದನ್ನು ಕುಡಿದ ನಂತರ ಪ್ರಜ್ಞಾಹೀನ ಸ್ಥಿತಿಗೆ ಹೋಗುತ್ತಿದ್ದೆ. ಈ ಸಂದರ್ಭದಲ್ಲಿ ಏನಾಗುತ್ತಿದೆ ಎಂದು ನನಗೆ ತಿಳಿಯುತ್ತಿರಲಿಲ್ಲ. ದಂಪತಿಗಳು ತನಗೆ ಲೈಂಗಿಕ ಕಿರುಕುಳ ನೀಡಿ ತಮ್ಮ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡು ಬೆದರಿಸಿ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ತಾಯಿ ಬಳಿ ಹೇಳಿಕೊಂಡಿದ್ದಾಳೆ. ಕೆಲವು ದಿನಗಳ ಹಿಂದೆ ತನ್ನ ಮಗಳ ನಿಶ್ಚಿತಾರ್ಥ ಮುರಿದುಬಿದ್ದ ನಂತರ ಅತ್ಯಾಚಾರದ ಬಗ್ಗೆ ತನಗೆ ತಿಳಿಯಿತು ಎಂದು ಸಂತ್ರಸ್ತೆಯ ತಾಯಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆರೋಪಿಗಳು ನನ್ನ ಮಗಳನ್ನು ಭೇಟಿಯಾಗಿ ಯಾರೊಂದಿಗಾದರೂ ಮದುವೆಯಾದರೆ ಕುಟುಂಬವನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಏತನ್ಮಧ್ಯೆ, ಎಫ್ಐಆರ್ ದಾಖಲಾದ ನಂತರ ಆರೋಪಿ ದಂಪತಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ALEART: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಹತ್ವದ ಮಾಹಿತಿ: ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು ಹೀಗಿದೆ
ಗಮನಿಸಿ: ರಾಜ್ಯ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್ ಪಡೆದುಕೊಳ್ಳಲು ಹೀಗೆ ಮಾಡಿ
BIGG NEWS : ಮದರಸಾಗಳ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ರಚಿಸಲು ‘ ರಾಜ್ಯ ಸರ್ಕಾರ ಸಿದ್ಧತೆ ‘