ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ವಿಜಯೋತ್ಸವದ ವೇಳೆಯಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಆರ್ ಸಿ ಬಿ, ಡಿಎನ್ ಎ ಪದಾಧಿಕಾರಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇಂದು ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವು ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ನಮ್ಮನ್ನು ಬಿಡುಗಡೆ ಮಾಡಲು ನಿರ್ದೇಶಿಸಬೇಕು ಎಂಬುದಾಗಿ ಆರ್ ಸಿ ಬಿ, ಡಿಎನ್ಎ ಪದಾಧಿಕಾರಿಗಳು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು.
ಈ ವಿಚಾರಣೆಯ ಬಳಿಕ ಆರ್ ಸಿ ಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎಯ ಆರ್ ಸುನಿಲ್ ಮ್ಯಾಥ್ಯೂ, ಎಸ್ ಕಿರಣ್ ಕುಮಾರ್ ಗೆ ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ವಿಚಾರಣೆಯನ್ನು ಬಂಧವಾರಕ್ಕೆ ಕಾಯ್ದಿರಿಸಿದೆ.
BREAKING : ರಾಜ್ಯದಲ್ಲಿ ‘ಜಾತಿಗಣತಿ’ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು