ಬೆಂಗಳೂರು : ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ನಶೆಯಲ್ಲಿ ಅಪಘಾತ ಮಾಡಿ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದೆ.
ಪ್ರಶಾಂತ್ (28) ಸಾವನ್ನಪ್ಪಿದ್ದು, ರೋಷನ್ ಹೆಗ್ಗಡಗೆ ಗಂಭೀರವಾದ ಗಾಯಗಳಾಗಿವೆ. ಕೊಲೆ ಮಾಡುತ್ತಿರುವ ದೃಶ್ಯ ಕಾರಿನ ಮುಂಭಾಗದ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ರಶಾಂತನ ಕೊಲೆ ಮಾಡಲಾಗಿದೆ ಅಂತ ಪೋಷಕರು ಗಂಭೀರವಾಗಿ ಆರೋಪ ಮಾಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೊಲೆ ಪ್ರಕರಣ ದಾಖಲಾಗಿದೆ








