ಬೆಂಗಳೂರು: ಫೆ.16ರ ನಾಳೆ ಬೆಂಗಳೂರು ಶಿಕ್ಷಕ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರು, ಬಿಬಿಎಂಪಿ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ(ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ) ದಿನಾಂಕ:16.02.2024ರ ಶುಕ್ರವಾರದಂದು ಉಪ ಚುನಾವಣೆಯನ್ನು ನಡೆಸಲು ಘೋಷಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯತ್ತಿರುವ ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತದ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ದಿನಾಂಕ: 16.02.2024ರ ಶುಕ್ರವಾರದಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಸೂಚನೆ ಮುಖಾಂತರ ಆದೇಶಿಸಿದೆ.

ಮುಂದುವರಿದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶಿಕ್ಷಕ‌ ಮತದಾರರು ಉಪ ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ವಿಶೇಷ ಸಾಂದರ್ಭಿಕ ರಜೆಯನ್ನು ನಿಯಮಾನುಸಾರ ಮಂಜೂರು ಮಾಡುವಂತೆ ಬೆಂಗಳೂರು ಶಿಕ್ಷಕರ ಕ್ಷೃತ್ರದ ವ್ಯಾಪ್ತಿಯ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಂಭಂದಪಟ್ಟವರು ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರು, ಮತದಾನ ಮಾಡಲು ಅನುಕೂಲವಾಗುವಂತೆ ರಜೆಗೆ ಅನುಮತಿ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿರುತ್ತಾರೆ.

Share.
Exit mobile version