ಬೆಂಗಳೂರು : ಇಂದು ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಕನ್ನಡಪರ ಸಂಘಟನೆಗಳು ಪ್ರತಿಭಟನೆ ರ್‍ಯಾಲಿ ಮೂಲಕ MES ಹಾಗೂ ಮಹಾರಾಷ್ಟ್ರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಈ ಒಂದು ಬಂದ್ ಬಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ತಟ್ಟಿದೆ. ವಿಮಾನ ನಿಲ್ದಾಣಕ್ಕೆ ಕಡಿಮೆ ಸಂಖ್ಯೆಯಲ್ಲಿ ಟ್ಯಾಕ್ಸಿಗಳು ಏರ್ ಪೋರ್ಟ್ ಗೆ ಸಂಚರಿಸುತ್ತಿವೆ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನತ್ತ ಹೆಚ್ಚಿನ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರಿಲ್ಲದೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೂರ್ತಿ ಖಾಲಿ ಖಾಲಿ ಆಗಿದೆ.