ಬೆಂಗಳೂರು : ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯು ಇದೇ ತಿಂಗಳು ಜುಲೈ 31ಕ್ಕೆ ಮುಕ್ತಾಯಗೊಳ್ಳಲಿದೆ. ಈ ಯೋಜನೆ ಅಡಿಯಲ್ಲಿ ಬಾಕಿ ಇರುವ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುತ್ತಿದೆ. ಬೆಂಗಳೂರಿನ ನಾಗರಿಕರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸೂಚಿಸಲಾಗಿದೆ.
ಆನ್ಲೈನ್ ಮೂಲಕ ಪಾವತಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://bbmptax.karnataka.gov.in ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.