ಬೆಂಗಳೂರು : ನಿನ್ನೆ ರಾಜಧಾನಿ ಬೆಂಗಳೂರುನಲ್ಲಿ ಭೀಕರ ವರುಣನ ಆರ್ಭಟಕ್ಕೆ ಬೆಂಗಳೂರಿನ ಜನತೆ ಸಂಪೂರ್ಣವಾಗಿ ನಲುಗಿ ಹೋಗಿದ್ದಾರೆ. ಅದರಲ್ಲೂ ಬೆಂಗಳೂರು ನಗರದ ಆರ್ ಆರ್ ನಗರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಕೆರೆ ಅಂತಾಗಿದ್ದು ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೌದು ನಿನ್ನೆ ರಾತ್ರಿಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ವರುಣನ ಅಬ್ಬರಕ್ಕೆ ರಾಜಧಾನಿ ಬೆಂಗಳೂರು ಅಲ್ಲೋಲ ಕಲ್ಲೋಲವಾಗಿದೆ.ರಸ್ತೆ ಜಲಾವೃತಗೊಂಡು ಟ್ರಾಫಿಕ್ ಜಾಮ್ ನಿಂದಾಗಿ ಜನ ಜೀವನ ಸಂಪೂರ್ಣವಾಗಿ ಆಸ್ತವೆಸ್ತವಾಗಿದೆ.
ಅದರಲ್ಲೂ ಬೆಂಗಳೂರಿನ ಮಳೆಯಿಂದ ರಸ್ತೆ ಸಂಪೂರ್ಣವಾಗಿ ಕೆಸರು ಗದ್ದೆಯಂತೆ ಆಗಿದೆ.ಆರ್ ಆರ್ ನಗರದ ಕೆರೆ ಕೋಡಿ ರಸ್ತೆಯಲ್ಲಿ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಸಂಪೂರ್ಣ ಕೆಸರುಗದ್ದೆಯಾಗಿ ರಸ್ತೆ ಬದಲಾಗಿದೆ ಗುಂಡಿ ರಸ್ತೆಯಲ್ಲಿ ಟ್ರ್ಯಾಕ್ ಕಾರು ಚಾಲಕರು ಪರದಾಟ ನಡೆಸುತ್ತಿದ್ದಾರೆ.