ಬೆಂಗಳೂರು : ಜುವೆಲ್ಲರೀ ಶಾಪಿಗೆ ನುಗ್ಗಿ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.ಜೂನ್ 25 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಾಚೋಹಳ್ಳಿಯಲ್ಲಿ ದರೋಡೆ ಪ್ರಕರಣ ನಡೆದಿತ್ತು.
ಇದೀಗ ಮಾದನಾಯಕನಹಳ್ಳಿ ಪೊಲೀಸ್ರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮೊಹಮ್ಮದ್ ರಫೀಕ್, ನೌಶಾದ್ ಹಾಗೂ ಮೊಹಮ್ಮದ್ ಇಬ್ತೆಹಾರ್ ಆರೋಪಿಗಳು ಎಂದು ತಿಳಿದು ಬಂದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದರೋಡೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.
ಮಾಚೋಹಳ್ಳಿಯಲ್ಲಿ ಜುವೆಲರಿ ಶಾಪ್ ಗೆ ನುಗ್ಗಿ ದರೋಡೆ ಮಾಡಿದ್ದರು ಇಡೀ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನೇ ಈ ಒಂದು ದರೋಡೆ ಪ್ರಕರಣ ಬೆಚ್ಚಿ ಬೀಳಿಸಿತ್ತು. ಪ್ಲಾಸ್ಟಿಕ್ ಗನ್ ಹಿಡಿದು ಈ ಗ್ಯಾಂಗ್ ಗೋಲ್ಡ್ ಶಾಪ್ ರಾಬರಿ ಮಾಡಿತ್ತು. 90 ಗ್ರಾಮ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಂದಿದ್ದರಿಂದ 30 ಲಕ್ಷ ಮೌಲ್ಯದ 90 ಗ್ರಾಮ್ ಚಿನ್ನಾಭರಣ ಎರಡು ಕಾರು ಜಪ್ತಿ ಮಾಡಿಕೊಳ್ಳಲಾಗಿದೆ. ಇದೆ ವೇಳೆ ಮತ್ತೊರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.