ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತ ಸಂಬಂಧ ಕೆ ಎಸ್ ಸಿ ಎಯ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಬಂಧಿತ ಆರೋಪಿಗಳಿಗೆ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಇಂದು ಕಾಲ್ತುಳಿತ ಪ್ರಕರಣ ಸಂಬಂಧ ಬಂಧಿತ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಹೀಗಾಗಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದಂತ ಆರ್ ಸಿ ಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್ ಸೋಸಲೆ, ಸುಮಂತ್, ಡಿಎನ್ಎ ಮ್ಯಾನೇಜರ್ ಕಿರಣ್, ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಜೈಲುಪಾಲಾದಂತೆ ಆಗಿದೆ.