ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಢಾಂಗದ ಬಳಿಯಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದರು. ಈ ಘಟನೆ ಸಂಬಂಧ ಆರ್ ಸಿ ಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಸಮಿತಿಯಿಂದ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಈ ವರದಿಯ ಕುರಿತಂತೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ.
ಸಂಪುಟ ಸಭೆಯಲ್ಲಿ ಆರ್ ಸಿ ಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅಲ್ಲದೇ ರಾಜ್ಯ ಕ್ರಿಕೆಟ್ ಸಂಸ್ಥೆಯ ವಿರುದ್ಧವೂ ಕ್ರಿಮಿನಲ್ ಕೇಸ್ ಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇನ್ನೂ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯ ವರದಿ ದೃಢೀಕರಿಸಲಾಗಿದೆ. ಅಲ್ಲದೇ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಸಾಧ್ಯತೆ ಇದೆ.
ಕರ್ನಾಟಕದ 2ನೇ ಶ್ರೇಷ್ಠ ಮೆಡಿಕಲ್ ಕಾಲೇಜು ಎಂಬ ಮನ್ನಣೆ ಪಡೆದ ಬಿಎಂಸಿಆರ್ ಐ
LIFE STYLE: ನೀವು ಗರ್ಭಿಣಿಯಾಗುತ್ತಿಲ್ಲವೇ? ಹಾಗಾದ್ರೇ ಇವು ಕೂಡ ಕಾರಣ ಇರಬಹುದು..!