ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾಗಿದ್ದಂತ ಕಾಲ್ತುಳಿತ ದುರಂತದ ಸಂಬಂಧ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಕೆ ಎಸ್ ಸಿಎಸ್ ಸಿಎ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ದುರಂತದಲ್ಲಿ 11 ಆರ್ ಸಿ ಬಿ ಅಭಿಮಾನಿಗಳು ಸಾವು ಪ್ರಕರಣದಲ್ಲಿ ಕೆ ಎಸ್ ಸಿ ಎ ಯ ಅಧಿಕಾರಿಗಳು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೀಠವು ನಡೆಸಿತು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಕೆ ಎಸ್ ಸಿ ಎ ಮಂಡಳಿಯ ಅಧ್ಯಕ್ಷರಾದಂತ ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜೈರಾಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಮಾಡಿದೆ.
ಅಂದಹಾಗೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ದುರಂತದ ಕಾರಣ ಕೆ ಎಸ್ ಸಿ ಎಯ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಕೆ ಎಸ್ ಸಿ ಎಯ ಮೂವರು ಅಧಿಕಾರಿಗಳಿಗೆ ಬಂಧನದ ಭೀತಿ ಎದುರಾಗಿತ್ತು. ಈಗ ಹೈಕೋರ್ಟ್ ಆದೇಶದಿಂದ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
BREAKING: ಬೆಂಗಳೂರಲ್ಲಿ RCB ಸಂಭ್ರಮಾಚರಣೆ ವೇಳೆ 11 ಅಭಿಮಾನಿಗಳ ಸಾವು ಕೇಸ್: ಮತ್ತೆರಡು ದೂರು ದಾಖಲು