ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಲ್ತುಲಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು, ನ್ಯಾ.ಕುನ್ಹಾ ವರದಿಯಲ್ಲಿ ಆರ್‌ಸಿಬಿ ತಂಡದ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಅವರ ಬಗ್ಗೆ ಪ್ರಸ್ತಾಪಿಸಿದರೆ ಆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನ್ಯಾ.ಕುನ್ಹಾ ವರದಿ ಮೇಲೆ ಸಂಪುಟದಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ. ಅವರು ಏನು ಶಿಫಾರಸು ಮಾಡಿದ್ದಾರೋ ಅದರಂತೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಅದರಂತೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ . ವಿರಾಟ್ ಕೊಹ್ಲಿ ಬಗ್ಗೆ ವರದಿಯಲ್ಲಿ ಪ್ರಸ್ತಾಪ ಮಾಡಿದರೆ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳುತ್ತೇವೆ. ಒಬ್ಬ ವ್ಯಕ್ತಿ ಅಂತ ಬರಲ್ಲ ತಂಡದ ವಿಚಾರ ಇರುತ್ತದೆ ಆ ಕುರಿತು ನೋಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.