Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ.ಬಿ ಪಾಟೀಲ್ ಘೋಷಣೆ
KARNATAKA

BIG NEWS: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ.ಬಿ ಪಾಟೀಲ್ ಘೋಷಣೆ

By kannadanewsnow0910/07/2024 4:28 PM

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಅತ್ಯಂತ ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ವಾರ್ಷಿಕವಾಗಿ 100 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ 4,500-5,000 ಎಕರೆ ಭೂಮಿ ಬೇಕಾಗಲಿದ್ದು, ಹಲವು ಅಂಶಗಳನ್ನು ಪರಿಗಣಿಸಿ ಇದನ್ನು ಉನ್ನತ ಮಟ್ಟದ ಸಮಿತಿಯು ಆಖೈರು ಮಾಡಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಬುಧವಾರ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ದೇಶದ ತಂತ್ರಜ್ಞಾನ ಮತ್ತು ನವೋದ್ಯಮಗಳ ರಾಜಧಾನಿಯೂ ಆಗಿದ್ದು, ಈಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೆಹಲಿ ಮತ್ತು ಮುಂಬೈ ನಂತರ ಅತಿದಟ್ಟಣೆಯಿಂದ ಕೂಡಿರುವ ಮೂರನೇ ಏರ್-ಪೋರ್ಟ್ ಆಗಿದೆ. ಸದ್ಯಕ್ಕೆ ಇಲ್ಲಿ ವರ್ಷಕ್ಕೆ 52 ಮಿಲಿಯನ್ ಪ್ರಯಾಣಿಕರ ಮತ್ತು 0.71 ಮಿಲಿಯನ್ ಟನ್ ಸರಕು ಸಾಗಣೆ ನಿರ್ವಹಣೆ ಆಗುತ್ತಿದೆ. ಇವುಗಳನ್ನು ಕ್ರಮವಾಗಿ 110 ಮಿಲಿಯನ್ ಮತ್ತು 1.10 ಮಿಲಿಯನ್ ಟನ್ ತನಕ ವಿಸ್ತರಿಸಬಹುದಾಗಿದ್ದು, 2035ರ ವೇಳೆಗೆ ಇದು ಗರಿಷ್ಠ ಮಟ್ಟ ತಲುಪಲಿದೆ. ಆದರೆ ಈಗ ಎರಡು ರನ್-ವೇ ಇದ್ದು, ಇದರಲ್ಲಿ ವಿಸ್ತರಣೆ ಸಾಧ್ಯವಿಲ್ಲದಂತಾಗಿದೆ ಎಂದು ಅವರು ವಿವರಿಸಿದರು.

ಯಾವ ದೃಷ್ಟಿಯಿಂದ ನೋಡಿದರೂ ಕೆಂಪೇಗೌಡ ಏರ್-ಪೋರ್ಟ್ 2035ರ ವೇಳೆಗೆ ತನ್ನ ಧಾರಣಾಶಕ್ತಿಯ ತುತ್ತತುದಿ ಮುಟ್ಟಲಿದೆ. ನಾವು ಈ ಯೋಜನೆಯನ್ನು ಘೋಷಿಸಿದ ನಂತರವಷ್ಟೇ ತಮಿಳುನಾಡು ಸರಕಾರವು ಹೊಸೂರಿನಲ್ಲಿ ನೂತನ ಏರ್-ಪೋರ್ಟ್ ನಿರ್ಮಿಸುವ ಮಾತುಗಳನ್ನಾಡಲು ಆರಂಭಿಸಿದೆ. ಅದರಿಂದ ನಮಗೇನೂ ತೊಂದರೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನೂತನ ವಿಮಾನ ನಿಲ್ದಾಣ ಬರಬೇಕೆಂದರೆ ಸುತ್ತಮುತ್ತ ಎಲ್ಲೂ ಬೆಟ್ಟಗುಡ್ಡ, ನದಿ/ಸಮುದ್ರಗಳಿರಬಾರದು. ಜತೆಗೆ ಗುಣಮಟ್ಟದ ರಾಜ್ಯ/ರಾಷ್ಟ್ರ ಹೆದ್ದಾರಿ, ರೈಲು ಮತ್ತು ಮೆಟ್ರೋ ಸಂಪರ್ಕ ಇರಬೇಕು. ಅಲ್ಲದೆ, ಕೇವಲ ಪ್ರಯಾಣಿಕರ ಹರಿವಿನ ದಟ್ಟಣೆಯನ್ನು ಪರಿಗಣಿಸಬೇಕೋ ಅಥವಾ ಕೈಗಾರಿಕಾ ಅಗತ್ಯಗಳನ್ನೂ ನೋಡಬೇಕೋ ಎನ್ನುವ ಅಂಶಗಳು ಮುಖ್ಯವಾಗುತ್ತವೆ. ಒಟ್ಟಿನಲ್ಲಿ ರಾಜ್ಯ ಸರಕಾರದ ಮನಸ್ಸಿನಲ್ಲಿ ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ, ದೊಡ್ಡಬಳ್ಳಾಪುರ, ಡಾಬಸಪೇಟೆ, ತುಮಕೂರು ಮುಂತಾದ ಸ್ಥಳಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣ ನಿರ್ಮಿಸಿರುವ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಬಿಐಎಎಲ್) 2033ರವರೆಗೆ 150 ಕಿ.ಮೀ. ಸುತ್ತಳತೆಯಲ್ಲಿ ಹೊಸ ವಿಮಾನ ನಿಲ್ದಾಣ ಸ್ಥಾಪಿಸಬಾರದು ಎನ್ನುವ ಷರತ್ತನ್ನು ಹಾಕಿತ್ತು. ಇದು 2033ಕ್ಕೆ ಮುಗಿಯಲಿದೆ. ನಾವು ಈಗಿನಿಂದಲೇ ಕೆಲಸ ಮಾಡಿದರೆ ಆ ವೇಳೆಗೆ ನೂತನ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಿಯೇ ಬಿಡಬಹುದು ಎಂದು ಪಾಟೀಲ ನುಡಿದರು.

ದೆಹಲಿ ಮತ್ತು ಮುಂಬೈಗಳಲ್ಲಿ ಹಳೆಯ ವಿಮಾನ ನಿಲ್ದಾಣಗಳಿಂದ 35-40 ಕಿ.ಮೀ. ದೂರದಲ್ಲೇ ಎರಡನೆಯ ವಿಮಾನ ನಿಲ್ದಾಣಗಳನ್ನೂ ನಿರ್ಮಿಸಲಾಗಿದೆ. ಇದನ್ನು ಕೂಡ ನಾವು ಪರಿಗಣಿಸಲಿದ್ದೇವೆ. ಒಟ್ಟಿನಲ್ಲಿ ಉದ್ದೇಶಿತ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಎಲ್ಲ ದೃಷ್ಟಿಯಿಂದಲೂ ಮತ್ತಷ್ಟು ಅನುಕೂಲವಾಗುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಎಚ್ ಡಿ ಕೆ‌‌ ಜತೆ‌ ಮಾತುಕತೆ

ರಾಜ್ಯದಲ್ಲಿನ ಕೈಗಾರಿಕಾಭಿವೃದ್ಧಿಗೆ ಕೇಂದ್ರದ ನೆರವು ಕೋರುವ ಬಗ್ಗೆ ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಸದ್ಯದಲ್ಲೇ ಖುದ್ದು ಭೇಟಿ ನೀಡಿ ಪ್ರಸ್ತಾವ ಸಲ್ಲಿಸಲಾಗುವುದು. ಅವರಿಗೂ ರಾಜ್ಯಕ್ಕೆ ಸೆಮಿಕಂಡಕ್ಟರ್ ಸೇರಿದಂತೆ ಬೃಹತ್ ಕೈಗಾರಿಕೆಗಳನ್ನು ತರಲು ಆಸಕ್ತಿ ಇದ್ದು ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ‌ ನೀಡಲಿದೆ ಎಂದು ಪಾಟೀಲ ಹೇಳಿದರು.

BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!

ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!

Share. Facebook Twitter LinkedIn WhatsApp Email

Related Posts

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM1 Min Read

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM1 Min Read

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM1 Min Read
Recent News

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

02/06/2025 4:28 PM

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಮನೆಯಲ್ಲಿ ಪಕ್ಷಿಗಳು ಗೂಡು ಕಟ್ಟಿದ್ರೆ ಶುಭವೋ.? ಅಶುಭವೇ.? ತಿಳಿಯದಿದ್ರೆ ನಿಮ್ಗೆ ತೊಂದ್ರೆ.!

02/06/2025 4:11 PM
State News
KARNATAKA

ಪುತ್ತಿಲ್, ಪ್ರಭಾಕರ್ ಭಟ್ ಗೆ ನೋಟಿಸ್ ವಿಚಾರ : ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ : ಮಾಜಿ ಸಂಸದ ಪ್ರತಾಪ್ ಸಿಂಹ

By kannadanewsnow0502/06/2025 4:28 PM KARNATAKA 1 Min Read

ಮೈಸೂರು : ದಕ್ಷಿಣ ಕನ್ನಡದಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಒಟ್ಟು 15 ಜನರ ವಿರುದ್ಧ FIR ದಾಖಲಾದ…

ಬಾನು ಮುಷ್ತಾಕ್, ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

02/06/2025 4:17 PM

BREAKING : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ : ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಭಸ್ಮ

02/06/2025 4:15 PM

ಬೆಂಗಳೂರಲ್ಲಿ ‘ಇವಿ ಹಬ್’ ಲೋಕಾರ್ಪಣೆ: ಚಾರ್ಜ್ ಮಾಡುವುದು ಹೇಗೆ? ದರ ಎಷ್ಟು ಗೊತ್ತಾ?

02/06/2025 4:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.