ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮೇ 8 ರಿಂದ 10ರವರೆಗೆ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮೇ 8 ರಿಂದ 10ರವರೆಗೆ ಮಳೆಯಾಗಲಿದೆ ಅಂಥ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮೇ 8 ರಿಂದ ಮೇ 10ರವರೆಗೆ ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೇ 9ರಿಂದ ಮುಂದಿನ ಎರಡು ದಿನ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆಯಂತೆ.