ಬೆಂಗಳೂರು: ನಿನ್ನೆಯಷ್ಟೇ ಬೆಂಗಳೂರಲ್ಲಿ ಮಳೆಯಾಗಿತ್ತು. ಬಿಸಿಲಿನಿಂದ ಕಂಗೆಟ್ಟಿದ್ದಂತ ಜನತೆಗೆ ತಂಪೆರೆದಿತ್ತು. ಈಗ ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಹವಾಮಾನ ಇಲಾಖೆಯು ಬೆಂಗಳೂರಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರದಲ್ಲಿ ಮಳೆ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನು, ಒಂದು ಅಥವಾ ಎರಡು ಸ್ಥಳಗಳಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ವ್ಯತ್ಯಯ, ಸಣ್ಣಪುಟ್ಟ ಸಂಚಾರ ದಟ್ಟನೆ. ದುರ್ಬಲ ಮರದ ಕೊಂಬೆಗಳು ಕಿತ್ತು ಬರುವ ಎಚ್ಚರಿಕೆಯನ್ನು ನೀಡಲಾಗಿದೆ.
ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ‘CBI’ ಗೆ ವಹಿಸಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹ
ಕಾಂಗ್ರೆಸ್ ತಾಳಿ ಕಿತ್ತುಕೊಳ್ಳುವ ಪಕ್ಷವಲ್ಲ ‘ತಾಳಿ ಭಾಗ್ಯ’ ಕೊಡುವ ಪಕ್ಷ : ಸಚಿವ HK ಪಾಟೀಲ್