ಬೆಂಗಳೂರು: ಸೆಪ್ಟಂಬರ್.7ರಂದು ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರು ನಗರದಲ್ಲಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗುತ್ತಿದೆ. ವಾಹನ ಸವಾರರಿಗೆ ಸಂಚಾರ ದಟ್ಟಣೆ ಉಂಟಾಗದಂತೆ ಪರ್ಯಾಯ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ( Bengaluru City Traffic Police ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ದಿನಾಂಕ 07.09.2024 ರಿಂದ ದಿನಾಂಕ:- 09.09.2024 ವರೆಗೆ ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40,000 ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವಿರುವುದರಿಂದ ವಾಹನಗಳ ಸುಗಮ ಸಂಚಾರದ ಹಿತದೃಷ್ಟಿಯಿಂದ ಮೇಲ್ಕಂಡ ದಿನಾಂಕಗಳಂದು ಸಂಜೆ 04-00 ಗಂಟೆಯಿಂದ ಮರುದಿನ ಬೆಳಗಿನ ಜಾವ 04:00 ಗಂಟೆ ವರೆಗೆ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ ಎಂದಿದ್ದಾರೆ.
ಸಂಚಾರ ನಿರ್ಬಂಧ:
> ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಕೇವಲ ಎಂಇ.ಜಿ ಕಡೆಯಿಂದ ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.
> ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಣ ಸ್ವಾಮಿ ಮೊದಲಿಯಾರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣ್ಯ ಸ್ವಾಮಿ ಮೊದಲಿಯಾ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಕೇವಲ ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುತ್ತದೆ.
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
ಕೆನ್ಸಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್ ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು- ಗಂಗಾಧರ ಚೆಟ್ಟಿ, ರಸ್ತೆ – ಡಿಕನ್‌ಸನ್ ರಸ್ತೆ ಬಲ ತಿರುವು- ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ-ವೀರ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿರುತ್ತದೆ.
ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಣ ಸ್ವಾಮಿ ಮೊದಾಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಚೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕೆನ್ಸ್ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಚಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಸ್ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದಾಗಿರುತ್ತದೆ.
ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು
ಹಲಸೂರು ಕರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್‌ಟನ್ ರಸ್ತೆ- ಅಣ್ಣ ಸ್ವಾಮಿ ಮೊದಲೀಯಾರ್ ರಸ್ತೆ-ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್‌ಅನ್ನು ದಿನಾಂಕ: 07/09/2024 ರಿಂದ 09.09.2024 ವರೆಗೆ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್‌ಅನ್ನು ತಾತ್ಕಾಲಿಕವಾಗಿ ನಿರ್ಬಂಧ ಮಾಡಲಾಗಿರುತ್ತದೆ..
ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ.
ಸೆ.14, 15 ರಂದು ‘ಗಗನಚುಕ್ಕಿ ಜಲಪಾತೋತ್ಸವ’: ಶಾಸಕ ಪಿ.ಎಂ ನರೇಂದ್ರಸ್ವಾಮಿ
ಗಣೇಶ ಚತುರ್ಥಿ, ದಸರಾ, ದೀಪಾವಳಿ ಹಬ್ಬದ ಪ್ರಯುಕ್ತ 22 ವಿಶೇಷ ರೈಲು ಸಂಚಾರ | Special Train
ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’