ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಯ ಹಿನ್ನಲೆಯಲ್ಲಿ ಬೆಂಗಳೂರಿನ ಮೈಕೋ ಲೇಔಟ್ ನಿಂದ ಆನೆಪಾಳ್ಯದವರೆಗೆ ಉತ್ತರ ದಿಕ್ಕಿನ ಮಾರ್ಗವನ್ನು ಒಂದು ವರ್ಷ ಬಂದ್ ಮಾಡಲಾಗಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರುವುದೇನೆಂದರೆ ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ದಿನಾಂಕ 01.04.2024 ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗುವುದು ಎಂದು ತಿಳಿಸಿದೆ.
ಈ ಸಂಬಂಧ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಭೋಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ ಎಡಕ್ಕೆ ತಿರುಗಿ ಚಲಿಸಬೇಕು. ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೆ ವ್ಯತ್ಯಯವಿರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್‌ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳುವುದು ಎಂದು ಹೇಳಿದೆ.
ಬೆಂಗಳೂರಿನ ಸಾರ್ವಜನಿಕರು ಮೇಲಿನ ಬದಲಾವಣೆಗಳನ್ನು ಗಮನಿಸಿ ಸಹಕರಿಸಬೇಕಾಗಿ ವಿನಂತಿಸಿದೆ.
ಲೋಕಸಭಾ ಚುನಾವಣೆ: ಶೇ.44ರಷ್ಟು ಸಂಸದರ ವಿರುದ್ಧ ಕ್ರಿಮಿನಲ್ ಕೇಸ್, ಶೇ.5ರಷ್ಟು ಮಂದಿ ಕೋಟ್ಯಧಿಪತಿಗಳು
ಸೋಲಿನ ಭಯದಿಂದ ವಿರೋಧ ಪಕ್ಷಗಳಿಗೆ ಕೇಂದ್ರದ ‘ಬಿಜೆಪಿ ಸರ್ಕಾರ’ದಿಂದ ಕಿರುಕುಳ- ಡಿಕೆಶಿ