ಬೆಂಗಳೂರು : ಬೆಂಗಳೂರಲ್ಲಿ ಮೆಡಿಕಲ್ ಕಾಲೇಜು ಬಳಿ ತೆಲಂಗಾಣ ಮೂಲದ ಇಬ್ಬರು ಆರೋಪಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದು ಈ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ಕೋಕೆ ಸೇರಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಮೆಡಿಕಲ್ ಕಾಲೇಜು ಬಳಿ ಮಾರಾಟ ಮಾಡುತ್ತಿದ್ದ 890 ಗ್ರಾಂ ಕೊಕೇನ್ ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು ಡ್ರಗ್ಸ್ ಮಾರುತಿದ್ದ ತೆಲಂಗಾಣ ಮೂಲದ ರಾಮಗೌಡ ಹಾಗೂ ಅಬೂಬಕರ್ ಎಂಬ ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಇವತ್ತಿನಿಂದ ನನ್ನ ಜೀವನದಲ್ಲಿ ‘ಹೊಸ ಅಧ್ಯಾಯ’ ಶುರುವಾಗಿದೆ : ಸಂಸದೆ ಸುಮಲತಾ ಅಂಬರೀಷ್
ಪೊಲೀಸರು ಇಬ್ಬರು ಆರೋಪಗಳನ್ನು ಬಂಧಿಸಿದ್ದು, ಅವರ ಬಳಿ ಇದ್ದ ಎಲೆಕ್ಟ್ರಾನಿಕ್ ತೂಕದ ಯಂತ್ರ, ಎರಡು ಮೊಬೈಲ್ ಫೋನ್, ಒಂದು ಬ್ಯಾಗ್ 85 ಪ್ಲಾಸ್ಟಿಕ್ ಜಿಪ್ ಪ್ಯಾಕೆಟ್, ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಆರೋಪಿಗಳನ್ನು ಬಂಧಿಸಿ ಪೊಲೀಸರು ಇದೀಗ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.