ಬೆಂಗಳೂರು : ನಗರದಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಯುವತಿಯನ್ನು ಬೆನ್ನಟ್ಟಿ ಡೋರ್ ತೆಗೆಯಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕನ್ನಡ ನಾಮಫಲಕ ಕಡ್ಡಾಯ: ‘ಸದ್ಗುರು’ ಹೆಸರನ್ನು ‘ಸತ್ತ ಗುರು’ ಎಂದು ಅನುವಾದಿಸಿದ ಅಂಗಡಿಯವ
ಈ ಒಂದು ಕೃತ್ಯದಲ್ಲಿ ಮತ್ತೋರ್ವ ಆರೋಪಿ ಭಾಗಿಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ. ಸದ್ಯ ಪೊಲೀಸ್ ವಶದಲ್ಲಿರುವ ಜಗನ್ನಾಥ್ ಹಾಗೂ ತೇಜಸ್ ಎಂಬುವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೆಂಗಳೂರಿನಲ್ಲಿ ಕಾರ್ಯನಿಮಿತ್ತ ನಿನ್ನೆ ರಾತ್ರಿ ಸೇಂಟ್ ಜಾನ್ ಆಸ್ಪತ್ರೆಗೆ ಬಂದಿದ್ದ ಯುವತಿಯು ಬೇಗೂರಿನಲ್ಲಿರುವ ತಮ್ಮ ಮನೆಗೆ ಹಿಂತಿರುಗುವಾಗ ಕೋರಮಂಗಲ ಬಳಿ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕಿಡಿಗೇಡಿಗಳು ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಮಡಿವಾಳದವರೆಗೂ ಫಾಲೋ ಮಾಡಿಕೊಂಡು ಬಂದಿದ್ದರಿಂದ ಆತಂಕಗೊಂಡ ಮಹಿಳೆ 112ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ತಕ್ಷಣ ಆತಂಕಗೊಂಡ ಯುವತಿ 112ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕಾರ್ಯಪ್ರವೃತ್ತರಾದ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಮಹಿಳೆ ನೀಡಿದ ದೂರನ್ನು ಆಧರಿಸಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.