ಬೆಂಗಳೂರು: ನಗರದಲ್ಲಿ ಭಾರೀ ಮಳೆ ಗಾಳಿಯಿಂದಾಗಿ ಬೃಹತ್ ಮರವೊಂದು ಆಟೋ ಮೇಲೆ ಉರುಳಿ ಬಿದ್ದಿದೆ. ಈ ಪರಿಣಾಮ ಆಟೋ ಜಖಂ ಆಗಿದ್ದರೇ, ಚಾಲಕ ಸೇರಿ ಇಬ್ಬರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಲ್ಲಿ ಆಟೋ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಇದರಿಂದಾಗಿ ಆಟೋ ಚಾಲಕ ದಿವಾಕರ್ ಎಂಬುವರ ಕಾಲು ಮುರಿದಿದೆ. ಅಲ್ಲದೇ ಮತ್ತೋರ್ವ ಪ್ರಯಾಣಿಕನಿಗೆ ಗಾಯವಾಗಿದೆ.
ಬಿಬಿಎಂಪಿಯ ನಿರ್ಲಕ್ಷ್ಯವೇ ಆಟೋ ಮರದ ಮೇಲೆ ಉರುಳಿ ಬೀಳುವುದಕ್ಕೆ ಕಾರಣ ಎನ್ನಲಾಗುತ್ತಿದೆ. ಮರ ಒಣಗಿದ್ದ ಸ್ಥಿತಿಯಲ್ಲಿ ಇದ್ದರೂ ತೆರವುಗೊಳಿಸದೇ ಇರುವುದೇ ಆಟೋ ಮೇಲೆ ಮುರಿದು ಬೀಳರು ಕಾರಣ ಎನ್ನಲಾಗುತ್ತಿದೆ.
ಈ ದುರ್ಘಟನೆಯಲ್ಲಿ ಗಾಯಗೊಂಡಿರುವಂತ ಆಟೋ ಚಾಲಕ ದಿವಾಕರ್ ಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ತಂದೆ ಕ್ಯಾನ್ಸರ್ ಪೀಡಿತರಾಗಿದ್ದರು, ಇವರೇ ಮನೆಯ ಹೊಣೆಗಾರಿಕೆಯನ್ನು ಆಟೋ ಚಲಾನೆ ಮಾಡಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ನಮ್ಮನ್ನು ಸರ್ವನಾಶ ಮಾಡುವುದು ‘ಕುಮಾರಸ್ವಾಮಿ’ ನಿತ್ಯದ ಆಲೋಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ
ಉತ್ತರ ಕ್ಯಾಲಿಫೋರ್ನಿಯಾದಲ್ಲಿ 1,78,000 ಎಕರೆ ಪ್ರದೇಶಕ್ಕೆ ಬೆಂಕಿ:134 ಕಟ್ಟಡಗಳು ನಾಶ